ಬುಧವಾರ, ಮೇ 25, 2022
23 °C

ಗೋವಾದಲ್ಲಿ ರಷ್ಯಾ ಮೂಲದ ಬಾಲಕಿ ಮೇಲೆ ಅತ್ಯಾಚಾರ: ಗದಗದಲ್ಲಿ ಆರೋಪಿ ಸೆರೆ

ಪಿಟಿಐ Updated:

ಅಕ್ಷರ ಗಾತ್ರ : | |

ಪಣಜಿ: ಉತ್ತರ ಗೋವಾದ ಅರಂಬೋಲ್‌ನಲ್ಲಿರುವ ರೆಸಾರ್ಟ್‌ನಲ್ಲಿ ರಷ್ಯಾ ಮೂಲದ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕರ್ನಾಟಕದ ವ್ಯಕ್ತಿಯೊಬ್ಬನನ್ನು ಗೋವಾ ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ.

ಮೇ 6 ರಂದು ಲೈಂಗಿಕ ದೌರ್ಜನ್ಯ ಪ್ರಕರಣ ಸಂಭವಿಸಿತ್ತು. ಗೋವಾದ ಪೆರ್ನೆಮ್‌ ಠಾಣೆ ಪೊಲೀಸರು ಆರೋಪಿ ರವಿ ಲಮಾಣಿ (28)ಯನ್ನು ಮೇ 10 ರಂದು ಗದಗದಲ್ಲಿ ಬಂಧಿಸಿದ್ದಾರೆ.

ಸಂತ್ರಸ್ತೆಯ ತಾಯಿ ಮೇ 9 ರಂದು ದೂರು ದಾಖಲಿಸಿದ್ದರು ಎಂದು ಪೊಲೀಸ್‌ ಅಧಿಕಾರಿಗಳು ಹೇಳಿದರು.

ಈ ಬಗ್ಗೆ ಮಾತನಾಡಿರುವ ಪೆರ್ನೆಮ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿಕ್ರಮ್ ನಾಯಕ್, ‘ರೆಸಾರ್ಟ್‌ನಲ್ಲಿ ರೂಮ್ ಅಟೆಂಡರ್‌ ಆಗಿದ್ದ ಆರೋಪಿಯು ಈಜು ಕೊಳ ಮತ್ತು ಕೊಠಡಿಯೊಳಗೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂದು ಸಂತ್ರಸ್ತೆಯ ತಾಯಿ ದೂರು ನೀಡಿದ್ದರು’ ಎಂದು ಹೇಳಿದ್ದಾರೆ.

ಸಂತ್ರಸ್ತೆ ತಾಯಿ ಕೆಲ ಅಗತ್ಯ ವಸ್ತುಗಳನ್ನು ಕೊಂಡು ತರಲೆಂದು ಅರಂಬೋಲ್‌ನ ಮಾರುಕಟ್ಟೆಗೆ ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಘಟನೆಯ ನಂತರ ಆರೋಪಿ ಪರಾರಿಯಾಗಿದ್ದ ಎಂದು ನಾಯಕ್ ಹೇಳಿದ್ದಾರೆ.

‘ದೂರು ಸ್ವೀಕರಿಸಿದ 24 ಗಂಟೆಯೊಳಗೆ ಆರೋಪಿಯನ್ನು ಗದಗದಲ್ಲಿ ಪತ್ತೆ ಹಚ್ಚಿ, ಬಂಧಿಸಲಾಯಿತು,' ಎಂದು ಹೇಳಿದರು ನಾಯಕ್ ಹೇಳಿದರು.

ಲಮಾಣಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376 (ಅತ್ಯಾಚಾರ), ಗೋವಾ ಮಕ್ಕಳ ರಕ್ಷಣಾ ಕಾಯ್ದೆಯ ಸೆಕ್ಷನ್ 8 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನಾಯಕ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು