ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಒಡ್ಡುವ ಸಂದೇಶವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದ ಅಬ್ದುಲ್ ಮಜೀದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಬಿಜೆಪಿಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಪ್ರವಾದಿ ಮಹಮ್ಮದ್ ಅವರನ್ನು ಅವಹೇಳನ ಮಾಡಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ಬಿಜೆಪಿ ನಾಯಕರು ಹಾಗೂ ಆರ್‌ಎಸ್‌ಎಸ್ ಮುಖಂಡರು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಎಲ್ಲರ ತಲೆ ಕತ್ತರಿಸುತ್ತೇವೆ ಎಂಬ ಸಂದೇಶವನ್ನು ಮಜೀದ್ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ. ಆತನ ವಿರುದ್ಧ ಮೊಘಲ್‌ಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಬುಧವಾರ ಬಂಧಿಸಿದ್ದಾರೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ನ್ಯಾಯಾಲಯದ ನಿರ್ದೇಶನದಂತೆ ನೋಟಿಸ್ ಕೂಡ ನೀಡಲಾಗಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.