ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು: 9.75 ಕೆ.ಜಿ ಸ್ಫೋಟಕ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

Last Updated 31 ಮಾರ್ಚ್ 2021, 7:33 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ಜಿಲೆಟಿನ್ ಕಡ್ಡಿ ಮತ್ತು ತಂತಿಗಳ ರೂಪದಲ್ಲಿದ್ದ 9.75 ಕೆ.ಜಿ.ಯಷ್ಟು ಸ್ಫೋಟಕ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಭದ್ರತಾ ಪಡೆಗಳು ಬುಧವಾರ ಬಂಧಿಸಿವೆ.

ಖಚಿತ ಮಾಹಿತಿ ಮೇರೆಗೆ ಗುಂಡಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ವ್ಯಕ್ತಿಯನ್ನು ಬಂಧಿಸಿ, ಆತನಿಂದ 78 ಜಿಲಟಿನ್‌ ಕಡ್ಡಿಗಳು ಮತ್ತು 275 ಮೀಟರ್‌ ತಂತಿಯನ್ನು ವಶಪಡಿಸಿಕೊಂಡಿರುವುದಾಗಿ ರಕ್ಷಣಾ ಇಲಾಖೆಯ ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಕಿಸ್ತ್ವಾರ್‌ ಜಿಲ್ಲೆಯ ಜಲವಿದ್ಯುತ್ ಯೋಜನಾ ಪ್ರದೇಶ ಸಮೀಪದ ಅಡಗುದಾಣವೊಂದರಿಂದ ಇದೇ ರೀತಿಯ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT