ಬಲ್ಲಿಯಾ (ಉತ್ತರ ಪ್ರದೇಶ): 2018ರಲ್ಲಿ 16 ವರ್ಷದ ದಲಿತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ನ್ಯಾಯಾಲಯ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ನ್ಯಾಯಾಧೀಶ ಶಿವಕುಮಾರ್ ಮಂಗಳವಾರ ರಾಹುಲ್ ಸಾಹ್ನಿ ಎಂಬಾತನಿಗೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಕ್ಕೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.

2018ರ ಜುಲೈ 1 ರಂದು ಚಿಟ್ಬಡ್ಗಾವ್ ಪ್ರದೇಶದ ಹಳ್ಳಿಯೊಂದರಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಸಾಹ್ನಿ ಎಂಬ ವ್ಯಕ್ತಿ ನನ್ನ ಮಗಳ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಬಾಲಕಿಯ ತಂದೆ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಪಿಂಗ್ ತಾಡಾ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆ ಸೆಕ್ಷನ್ 366 (ಅಪಹರಣ) ಮತ್ತು 376 (ಅತ್ಯಾಚಾರ), ಮತ್ತು ಎಸ್ಸಿ / ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಪೊಕ್ಸೊ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿತ್ತು.

ಬಾಲಕಿಯನ್ನು ಅಪಹರಿಸಿದ್ದಕ್ಕೆ ಅಪರಾಧಿಗೆ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು, ಎಸ್ಸಿ / ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಪೊಕ್ಸೊ ಕಾಯ್ದೆಯಡಿ ಅತ್ಯಾಚಾರ ಅಪರಾಧಕ್ಕೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.