ಸೋಮವಾರ, ಜೂನ್ 27, 2022
28 °C

ಪತ್ನಿಯನ್ನು ಹತ್ಯೆಗೈದು, ಮೃತದೇಹವನ್ನು ಬೀದಿಯಲ್ಲಿ ಎಳೆದೊಯ್ದ ವ್ಯಕ್ತಿ!

ಪಿಟಿಐ Updated:

ಅಕ್ಷರ ಗಾತ್ರ : | |

ಕೋಟಾ (ರಾಜಸ್ಥಾನ): ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ಇಲ್ಲಿನ ಬೀದಿಯಲ್ಲಿ ಹಲವು ಮೀಟರ್‌ವರೆಗೂ ಎಳೆದೊಯ್ದಿದ್ದಾನೆ. ಅಲ್ಲದೆ ದಾಳಿಯಲ್ಲಿ ಗಾಯಗೊಂಡಿದ್ದ ಅವರ ಒಂಬತ್ತು ತಿಂಗಳ ಮಗು ಕೂಡ ಆಸ್ಪತ್ರೆಯಲ್ಲಿ ಮೃತಪಟ್ಟಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ ರಾಂಪುರದಲ್ಲಿ ಈ ಘಟನೆ ನಡೆದಿದ್ದು, ನಂತರ ಆ ವ್ಯಕ್ತಿ ಪೊಲೀಸರಿಗೆ ಶರಣಾಗಿದ್ದಾನೆ.

ಭಟ್ಟಪದ ಪ್ರದೇಶದ ನಿವಾಸಿ ಪಿಂಟು ಅಲಿಯಾಸ್ ಸುನಿಲ್ ವಾಲ್ಮೀಕಿ (40) ಅವರ ಪತ್ನಿ ಸೀಮಾ (35) ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ್ದಾನೆ. ಇದರಿಂದಾಗಿ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ನಂತರ ಆತ ಆಕೆಯ ದೇಹವನ್ನು ಬೀದಿಯಲ್ಲಿ 70-80 ಮೀಟರ್ ಎಳೆದೊಯ್ದು ಆ ಪ್ರದೇಶದಲ್ಲಿ ಭೀತಿಯನ್ನು ಸೃಷ್ಟಿಸಿದ್ದಾನೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸರ್ಕಲ್ ಇನ್ಸ್‌ಪೆಕ್ಟರ್ ರಾಮ್ ಕಲ್ಯಾಣ್ ತಿಳಿಸಿದ್ದಾರೆ.

ಬಳಿಕ ಶವವನ್ನು ಬೀದಿಯಲ್ಲಿಯೇ ಬಿಟ್ಟು ವಾಲ್ಮೀಕಿ ರಾಂಪುರ ಪೊಲೀಸ್ ಠಾಣೆಯಲ್ಲಿ ಶರಣಾಗಿ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಡಿಎಸ್‌ಪಿ ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ ದಂಪತಿಯ ಪುತ್ರ ಅವಿನಾಶ್, ಬುಧವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಮೃತಪಟ್ಟಿದ್ದಾನೆ. ಆದಾಗ್ಯೂ, ಮಗುವಿಗೆ ಹೇಗೆ ಗಾಯಗಳಾದವು ಎಂಬ ಬಗ್ಗೆ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಮತ್ತು ಮಗುವಿನ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಪೊಲೀಸರು ಕಳುಹಿಸಿದ್ದಾರೆ. ಕೊಲೆಯ ಹಿಂದಿನ ಉದ್ದೇಶವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಡಿಎಸ್‌ಪಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು