ಬುಧವಾರ, ಮೇ 25, 2022
30 °C
ಏಳು ಮಂದಿ ವಶಕ್ಕೆ

ಗೋವು ಕಳ್ಳಸಾಗಣೆ ಆರೋಪ: ಹಲ್ಲೆ ನಡೆಸಿ ವ್ಯಕ್ತಿಯ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೈಪುರ: ಗೋವು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಏಳೆಂಟು ಜನರ ಗುಂಪೊಂದು ಒಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದು, ಮತ್ತೊಬ್ಬನನ್ನು ತೀವ್ರವಾಗಿ ಗಾಯಗೊಳಿಸಿದ ಘಟನೆ ರಾಜಸ್ಥಾನದ ಚಿತ್ತೋರ್‌ಗಡ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಹತ್ಯೆಗೀಡಾದ ವ್ಯಕ್ತಿಯನ್ನು ಬಾಬು ಭಿಲ್ (25) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಪಿಂಟು ಭಿಲ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಏಳು ಜನರನ್ನು ವಶಕ್ಕೆ ಪಡೆಯಲಾಗಿದೆ.

ಬಾಬು ಮತ್ತು ಪಿಂಟು ಅವರು ಜೂನ್ 13ರ ಮಧ್ಯರಾತ್ರಿಯಲ್ಲಿ ಜಾನುವಾರುಗಳನ್ನು ಮಧ್ಯಪ್ರದೇಶಕ್ಕೆ ಸಾಗಿಸುತ್ತಿದ್ದಾಗ ಆರೋಪಿಗಳು ಭಿಲ್ಖಂಡ ಬಳಿ ಹಿಡಿದು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

’ಬಂಧಿತರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ‘ ಎಂದು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ರವಿ ಮೆಹರ್ಡಾ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು