ಬಾಲಕಿ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ

ಲಲಿತಪುರ (ಉತ್ತರ ಪ್ರದೇಶ): ಎಂಟು ವರ್ಷದ ಬಾಲಕಿಯನ್ನು ಕೊಲೆ ಮಾಡಿದ್ದ ವ್ಯಕ್ತಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ಪೋಕ್ಸೊ) ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
2017ರಲ್ಲಿ ರೂಪ್ಲಾಲ್ ಸಹ್ರಿಯಾ ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿ ವಿಫಲನಾಗಿದ್ದ. ಬಳಿಕ ಬಾಲಕಿಯನ್ನು ಕೊಂದಿದ್ದ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ನಿರ್ಭಯ ಪ್ರಕಾಶ್ ಅವರು, ಅಪರಾಧಿಗೆ ಜೀವವಾಧಿ ಶಿಕ್ಷೆಯ ಜತೆಗೆ ₹50,000 ದಂಡವನ್ನೂ ವಿಧಿಸಿ ಆದೇಶಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.