ಸೋಮವಾರ, ಜನವರಿ 17, 2022
19 °C

15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ವಿಡಿಯೊ ಮಾಡಿದ್ದವನಿಗೆ 10 ವರ್ಷ ಜೈಲು

ಪಿಟಿಐ Updated:

ಅಕ್ಷರ ಗಾತ್ರ : | |

ಸುಲ್ತಾನ್‌ಪುರ (ಯುಪಿ): ಎರಡು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ವಿಡಿಯೊ ಚಿತ್ರೀಕರಿಸಿದ್ದ ವ್ಯಕ್ತಿಗೆ ಇಲ್ಲಿನ ನ್ಯಾಯಾಲಯವು 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ವಿಶೇಷ ನ್ಯಾಯಾಧೀಶ ಪವನ್ ಕುಮಾರ್ ಶರ್ಮಾ ಅವರು ಅಪರಾಧಿ ಸೂರಜ್ ಸರೋಜ್‌ಗೆ 51,000 ರೂಪಾಯಿ ದಂಡವನ್ನೂ ಸಹ ವಿಧಿಸಿದ್ದಾರೆ.

ಇಲ್ಲಿನ ಸಂಗ್ರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ ತನ್ನ 15 ವರ್ಷದ ಮಗಳನ್ನು ಸೂರಜ್ ಸರೋಜ್ ಬಲವಂತವಾಗಿ ಕೋಳಿ ಫಾರಂಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು 2020ರ ಜನವರಿ 25 ರಂದು ಸಂತ್ರಸ್ತೆಯ ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರುದಾರರ ಪ್ರಕಾರ, ತನ್ನ ಸಹಚರರ ನೆರವಿನೊಂದಿಗೆ ಸೇರಿ ಕೃತ್ಯವನ್ನು ಚಿತ್ರೀಕರಿಸಿದ್ದ ಸೂರಜ್ ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹುಡುಗಿಗೆ ಬೆದರಿಕೆ ಹಾಕಿದ್ದ.

ದೂರಿನ ಆಧಾರದ ಮೇಲೆ, ಜನವರಿ 29, 2020 ರಂದು ಸೂರಜ್ ವಿರುದ್ಧ ಪ್ರಕರಣ ದಾಖಲಿಸಿ, ಅವನನ್ನು ಬಂಧಿಸಲಾಗಿತ್ತು. ಬಳಿಕ ಪೊಲೀಸರು ಆತನ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು