ಶನಿವಾರ, ಸೆಪ್ಟೆಂಬರ್ 25, 2021
22 °C

ಹೈದರಾಬಾದ್: ಕೋವಿಡ್-19ಗೆ ಹೆದರಿ ಆತ್ಮಹತ್ಯೆಗೆ ಶರಣಾದ ಸೋಂಕಿತ ವ್ಯಕ್ತಿ

ಪಿಟಿಐ Updated:

ಅಕ್ಷರ ಗಾತ್ರ : | |

prajavani

ಹೈದರಾಬಾದ್: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್-19 ಸೋಂಕಿತ 60 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ವೈರಸ್ ಭಯದಿಂದಾಗಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರೀಂನಗರ ಜಿಲ್ಲೆಯ ವ್ಯಕ್ತಿಯು ಮುಂಜಾನೆ 1 ಗಂಟೆಯಿಂದ 2ರ ಸುಮಾರಿಗೆ ಆಸ್ಪತ್ರೆಯ ತನ್ನ ಕೋಣೆಗೆ ಹೊಂದಿಕೊಂಡಂತಿದ್ದ ಶೌಚಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ವ್ಯಕ್ತಿಯು ನೇಣು ಹಾಕಿಕೊಂಡಿರುವುದನ್ನು ನರ್ಸ್‌ ಗಮನಿಸಿದ್ದಾರೆ. ಬಳಿಕ ಆಸ್ಪತ್ರೆಯ ಇತರ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೋವಿಡ್-19 ಸೋಂಕು ತಗುಲಿದ್ದು ದೃಢಪಟ್ಟಿದ್ದರಿಂದಾಗಿ ಕಳೆದ ನಾಲ್ಕು ದಿನಗಳ ಹಿಂದಷ್ಟೇ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪ್ರಾಥಮಿಕ ತನಿಖೆ ಪ್ರಕಾರ, ಕೊರೊನಾ ವೈರಸ್‌ ಸೋಂಕಿನ ಭಯದಿಂದಾಗಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದಿದ್ದಾರೆ. ಕೋವಿಡ್-19ನಿಂದಾಗಿ ಕಳೆದ ಕೆಲವು ದಿನಗಳಿಂದಲೂ ಈ ವ್ಯಕ್ತಿ ಭಯಭೀತನಾಗಿದ್ದ ಎಂದು ಮೃತರ ಕುಟುಂಬ ಸದಸ್ಯರು ಪೊಲೀಸರಿಗೆ ತಿಳಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು