ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲ್ಯೂಮ್ ತಗ್ಗಿಸಲು ಹೇಳಿದ್ದಕ್ಕೆ ಪೊಲೀಸರ ಮೇಲೆ ಕಾರು ಹರಿಸಲು ಯತ್ನಿಸಿದ ವ್ಯಕ್ತಿ

Last Updated 11 ಮಾರ್ಚ್ 2023, 2:35 IST
ಅಕ್ಷರ ಗಾತ್ರ

ನವದೆಹಲಿ: ವಾಲ್ಯೂಮ್‌ ತಗ್ಗಿಸುವಂತೆ ಹೇಳಿದ ಪೊಲೀಸ್‌ ಪೇದೆ ಮೇಲೆ ವ್ಯಕ್ತಿಯೊಬ್ಬ ಕಾರು ಹರಿಸಲು ಯತ್ನಿಸಿದ ಘಟನೆ ದೆಹಲಿಯ ದ್ವಾರಕಾ ಎಂಬಲ್ಲಿ ಮಾರ್ಚ್ 8ರಂದು ಹೋಳಿ ಹಬ್ಬದ ದಿನ ನಡೆದಿದೆ.

ಆರೋಪಿಯನ್ನು ಇಲ್ಲಿನ ಧುಲ್ಸಿರಸ್ ಗ್ರಾಮದ ನಿವಾಸಿ ನಿತಿನ್ ಗೋಡಾರ(29) ಎಂದು ಗುರುತಿಸಲಾಗಿದೆ.

ದ್ವಾರಕಾದ ಸೆಕ್ಟರ್‌ – 10ರ ಮಾರುಕಟ್ಟೆ ಪ್ರದೇಶದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಹೋಳಿ ಹಬ್ಬದಂದು ರಾತ್ರಿ 8.30ರ ಸುಮಾರಿಗೆ ಕಾರಿನಲ್ಲಿ ಜೋರು ವಾಲ್ಯೂಮ್‌ನಲ್ಲಿ ಹಾಡುಗಳು ಕೇಳಿಬರುತ್ತಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಾರಿನಲ್ಲಿ ಹಾಡಿನ ವಾಲ್ಯೂಮ್‌ ಕಡಿಮೆ ಮಾಡಲು ಹೇಳಿದಾಗ ಆರೋಪಿಯು, ಹೆಡ್ ಕಾನ್ಸ್‌ಟೇಬಲ್ ಜಗದೀಶ್‌ಗೆ ಕಾರಿನಿಂದ ಡಿಕ್ಕಿ ಹೊಡೆಯಲು ಯತ್ನಿಸಿದ್ದಾನೆ. ಅವರು ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ. ಆದರೆ ಈ ಸಂದರ್ಭದಲ್ಲಿ ಜಗದೀಶ್‌ಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿ ಹೇಳಿದ್ದಾರೆ

ಆತನು ಪಾನಮತ್ತನಾಗಿದ್ದು, ವೈದ್ಯಕೀಯ ಪರೀಕ್ಷೆಗಳಲ್ಲಿ ಇದು ಧೃಡವಾಗಿದೆ. ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT