ಕೊಯಮತ್ತೂರು: ಆರ್‌ಎಸ್‌ಎಸ್ ಮುಖಂಡರೊಬ್ಬರ ಇಲ್ಲಿನ ಮನೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮೊಹಮ್ಮದ್ ಶಫಿ ಬಂಧಿತ ಆರೋಪಿ. ಬಂಧಿತನ ಇಬ್ಬರು ಸಹಚರರಿಗಾಗಿ ಶೋಧ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಕೋವೈಪುದೂರು ಎಂಬಲ್ಲಿ ಕಳೆದ ವರ್ಷ ಸೆಪ್ಟೆಂಬರ್ 22ರಂದು ಈ ಘಟನೆ ನಡೆದಿತ್ತು. ಪಿಎಫ್‌ಐ ನಿಷೇಧಿಸಿದ ಬೆನ್ನಲ್ಲೇ ಒಟ್ಟು ಆರು ಕಡೆಗಳಲ್ಲಿ ಕಲ್ಲು ತೂರಾಟ ಹಾಗೂ ಬಾಂಬ್ ಎಸೆದ ಘಟನೆಗಳು ನಡೆದಿದ್ದವು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.