ಬುಧವಾರ, ಮೇ 18, 2022
24 °C

ಕೇಂದ್ರದಿಂದ ಕರ್ನಾಟಕ ಸೇರಿ ಎಂಟು ರಾಜ್ಯಗಳ ಕೋವಿಡ್ ಸ್ಥಿತಿಗತಿ ಪರಿಶೀಲನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕರ್ನಾಟಕ ಸೇರಿದಂತೆ ಎಂಟು ರಾಜ್ಯ/ಕೇಂದ್ರಾಡಳಿತ ಪ್ರದೇಶಗಳ ಕೋವಿಡ್ ನಿರ್ವಹಣಾ ಸ್ಥಿತಿಗತಿ ಕುರಿತು ಇಂದು (ಜ.28, ಶುಕ್ರವಾರ) ಕೇಂದ್ರ ಸರ್ಕಾರವು ಪರಿಶೀಲಿಸಲಿದೆ.

ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ, ಆಂಧ್ರ ಪ್ರದೇಶ, ಕೇರಳ, ತೆಲಂಗಾಣ, ಲಕ್ಷದ್ವೀಪ, ತಮಿಳುನಾಡು, ಪುದುಚೇರಿ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಕೋವಿಡ್ ಪರಿಸ್ಥಿತಿ ನಿರ್ವಹಣೆ ಮತ್ತು ಸಾರ್ವಜನಿಕ ಆರೋಗ್ಯ ಸಿದ್ಧತೆ ಕುರಿತು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಶುಕ್ರವಾರ ಪರಿಶೀಲನೆ ನಡೆಸಲಿದ್ದಾರೆ. 

ಇದನ್ನೂ ಓದಿ: 

ಶುಕ್ರವಾರ ಮಧ್ಯಾಹ್ನ 2.30ಕ್ಕೆ ವಿಡಿಯೊ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆ ನಿಗದಿಯಾಗಿದೆ.

ಭಾರತದಲ್ಲಿ ಓಮೈಕ್ರಾನ್ ಸಮುದಾಯ ಪ್ರಸರಣ ಹಂತದಲ್ಲಿದ್ದು, ಮೆಟ್ರೊ ನಗರಗಳಲ್ಲಿ ಹೊಸ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿವೆ.

ಮಾದರಿಗಳನ್ನು ಸಂಗ್ರಹಿಸಿ ನಡೆಸಿದ ಜಿನೋಮ್ ಸೀಕ್ವೆನ್ಸಿಂಗ್‌ನಲ್ಲಿ ಶೇ 75ರಷ್ಟು ಓಮೈಕ್ರಾನ್ ಸೋಂಕು ಇರುವುದು ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ಕೋವಿಡ್ ಪರಿಣಾಮಕಾರಿ ನಿರ್ವಹಣೆಗಾಗಿ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಕುರಿತು ಅವಲೋಕನ ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು