ಸೋಮವಾರ, ನವೆಂಬರ್ 30, 2020
27 °C

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗೆ ಕೋವಿಡ್–19 ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಿಜೋರಾಂ: ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್‌ ಅವರಿಗೆ ಕೋವಿಡ್‌–19 ದೃಢಪಟ್ಟಿದೆ. ಈ ವಿಚಾರವನ್ನು ಸಿಂಗ್‌ ಅವರೇ ಟ್ವಿಟರ್‌ ಮೂಲಕ ಹಂಚಿಕೊಂಡಿದ್ದು, ಇತ್ತೀಚೆಗೆ ತಮ್ಮನ್ನು ಭೇಟಿಯಾದವರು ಕೂಡಲೇ ಪರೀಕ್ಷೆಗೆ ಮಾಡಿಸಿಕೊಳ್ಳಿ ಮತ್ತು ಪ್ರತ್ಯೇಕವಾಸದಲ್ಲಿ ಉಳಿಯಿರಿ ಎಂದು ಮನವಿ ಮಾಡಿದ್ದಾರೆ.

 

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಮಣಿಪುರದಲ್ಲಿ ಇದುವರೆಗೆ ಒಟ್ಟು 21,636 ಜನರಿಗೆ ಕೋವಿಡ್‌–19 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 18,334 ಸೋಂಕಿತರು ಗುಣಮುಖರಾಗಿದ್ದು, 218 ಮಂದಿ ಮೃತಪಟ್ಟಿದ್ದಾರೆ.

 

ದೇಶದಾದ್ಯಂತ ಶನಿವಾರ ಒಂದೇ ದಿನ 41,100 ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 88,14,579ಕ್ಕೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 1,29,635ಕ್ಕೆ ತಲುಪಿದೆ. 82,05,728 ಸೋಂಕಿತರು ಗುಣಮುಖರಾಗಿದ್ದು, 4,79,216 ಸಕ್ರಿಯ ಪ್ರಕರಣಗಳು ಇವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು