ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Manipur Election Results: ಮತ್ತೆ ಬಿಜೆಪಿಗೆ ಮಣಿಪುರದ ಗದ್ದುಗೆ

Last Updated 10 ಮಾರ್ಚ್ 2022, 16:02 IST
ಅಕ್ಷರ ಗಾತ್ರ

ಇಂಫಾಲ:ಮಣಿಪುರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆತಿದೆ. ಆ ಮೂಲಕ ಎರಡನೇ ಬಾರಿಗೆ ಬಿಜೆಪಿಯು ಅಧಿಕಾರದ ಗದ್ದಗೆ ಏರಲಿರುವುದು ನಿಚ್ಚಳವಾಗಿದೆ.

ಮಣಿಪುರದ 60 ಕ್ಷೇತ್ರಗಳ ಪೈಕಿಬಿಜೆಪಿಯು32 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. 5 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮತ್ತು 18 ಕ್ಷೇತ್ರಗಳಲ್ಲಿ ಪಕ್ಷೇತರರು ಗೆಲುವುಸಾಧಿಸಿದ್ದಾರೆ.

ಹೀಂಗಾಂಗ್‌ ಕ್ಷೇತ್ರದಿಂದ ಸ್ಪರ್ಧಿಸಿರುವ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ 18,271 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ.

ಫೆ. 28 ಮತ್ತು ಮಾರ್ಚ್ 5 ರಂದು ನಡೆದ ಎರಡು ಹಂತದ ಚುನಾವಣೆಯಲ್ಲಿ ಶೇ 89.3ರಷ್ಟು ಮತದಾನವಾಗಿತ್ತು.

ವಿವಿಧ ರಾಜಕೀಯ ಪಕ್ಷಗಳ 17 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 265 ಜನ ಅಭ್ಯರ್ಥಿಗಳು ಕಣದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT