ಮಣಿಪುರ: ಸ್ಫೋಟಕ ಸಾಮಗ್ರಿಗಳ ಸಹಿತ ಉಗ್ರನ ಬಂಧನ

ಇಂಫಾಲ: ಪಶ್ಚಿಮ ಇಂಫಾಲ ಜಿಲ್ಲೆಯಲ್ಲಿ, ನಿಷೇಧಿತ ಪೀಪಲ್ಸ್ ರೆವಲ್ಯೂಷನರಿ ಪಾರ್ಟಿ ಆಫ್ ಕಂಗ್ಲೀಪಾಕ್- ಪ್ರೊಗ್ರೆಸಿವ್ ಎಂಬ ಬಂಡುಕೋರ ಸಂಘಟನೆಯ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನಿಂದ ಸುಧಾರಿತ ಸ್ಫೋಟಕ ಸಾಧನದಲ್ಲಿ (ಐಇಡಿ) ಬಳಸುವ, ಬೃಹತ್ ಪ್ರಮಾಣದ ಸಾಮಗ್ರಿಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಐಬೊಮ್ಚಾ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
‘ಜಿಲ್ಲೆಯ ಲಾಂಫೆಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಸಂಘಟನೆಯ ಉಗ್ರನನ್ನು ಬಂಧಿಸಲಾಗಿದೆ’ ಎಂದು ತಿಳಿಸಿದ್ದಾರೆ.
‘2013ರಲ್ಲಿ ಮುಖ್ಯಮಂತ್ರಿ ನಿವಾಸದ ಗೇಟ್ ಬಳಿ ಮತ್ತು ಇಂಫಾಲದ ರೆಸ್ಟೋರೆಂಟ್‌ವೊಂದರ ಸಮೀಪ ಸಂಭವಿಸಿದ್ದ ಸ್ಪೋಟ ಪ್ರಕರಣಗಳಲ್ಲಿ ತನ್ನ ಪಾತ್ರ ಇತ್ತು ಎಂಬುದಾಗಿ ಬಂಧಿತ ಉಗ್ರ ವಿಚಾರಣೆ ವೇಳೆ ತಿಳಿಸಿದ್ದಾನೆ’ ಎಂದೂ ಅವರು ವಿವರಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.