ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರ ಹಿಂಸಾಚಾರ ಪ್ರಕರಣ: 5 ದಿನದವರೆಗೆ ಇಂಟರ್‌‌ನೆಟ್ ಸೇವೆ ಸ್ಥಗಿತ

Last Updated 7 ಆಗಸ್ಟ್ 2022, 7:16 IST
ಅಕ್ಷರ ಗಾತ್ರ

ಇಂಫಾಲ: ಬಿಷ್ಣುಪುರ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸಂಘಟನೆಯೊಂದು ಶನಿವಾರ ಕರೆ ನೀಡಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದಿದೆ. ಈ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯದಾದ್ಯಂತ 5 ದಿನಗಳವರೆಗೆ ಇಂಟರ್‌‌ನೆಟ್ ಸೇವೆ ಸ್ಥಗಿತಗೊಳಿಸಿ ಮಣಿಪುರ ಸರ್ಕಾರ ಆದೇಶ ಹೊರಡಿಸಿದೆ.

ಕೆಲ ಕಿಡಿಗೇಡಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಡುವ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿರುವುದು ಗಮsನಕ್ಕೆ ಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಇಂಟರ್‌‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ಗೃಹ ಇಲಾಖೆಯ ಆಯುಕ್ತ ಎಚ್.ಜ್ಞಾನ್ ಪ್ರಕಾಶ್ ತಿಳಿಸಿದ್ದಾರೆ.

ಶನಿವಾರ ಮಧ್ಯಾಹ್ನ 3.35ರ ಸುಮಾರಿಗೆ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ವಾಹನವೊಂದನ್ನು ಸುಟ್ಟುಹಾಕಿದ್ದರು. ಘಟನೆಯ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಕೆಲವರು ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದಾರೆ ಎಂದು ಪ್ರಕಾಶ್ ಹೇಳಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಣಿಪುರದ ಎಲ್ಲಾ ಬುಡಕಟ್ಟು ವಿದ್ಯಾರ್ಥಿಗಳ ಒಕ್ಕೂಟ (ಎಟಿಎಸ್‌ಯುಎಂ) ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT