ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಸಿಬಿಐನಿಂದ ಮನೀಶ್ ಸಿಸೋಡಿಯಾ ಬಂಧನ 

Last Updated 26 ಫೆಬ್ರುವರಿ 2023, 14:44 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್‌ಶೀಟ್ ಸಲ್ಲಿಸಿದ ಸುಮಾರು ಮೂರು ತಿಂಗಳ ಬಳಿಕ ಸಿಬಿಐ ಅಧಿಕಾರಿಗಳು ಮನೀಶ್ ಸಿಸೋಡಿಯಾ ಅವರನ್ನು ಇಂದು ಬೆಳಿಗ್ಗೆ ವಿಚಾರಣೆಗೆ ಒಳಪಡಿಸಿದ್ದರು. ಸತತ ಎಂಟು ಗಂಟೆಗಳ ವಿಚಾರಣೆ ಬಳಿಕ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಆಮ್ ಆದ್ಮಿ ಪಕ್ಷದ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿರುವ ಮನೀಶ್ ಸಿಸೋಡಿಯಾ ಅವರು ಅಬಕಾರಿ ಇಲಾಖೆಯ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದರು. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಅಕ್ಟೋಬರ್‌ 17ರಂದು ವಿಚಾರಣೆ ನಡೆಸಲಾಗಿತ್ತು. ಅಷ್ಟೇ ಅಲ್ಲ ಅವರ ಮನೆ ಮತ್ತು ಬ್ಯಾಂಕ್ ಲಾಕರ್‌ಗಳನ್ನೂ ಶೋಧಿಸಲಾಗಿತ್ತು.

ಸಿಬಿಐ ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬಂಧನ ಖಂಡಿಸಿ ದೇಶದಾದ್ಯಂತ ಸಿಬಿಐ ಕಚೇರಿಗಳ ಎದುರು ನಾಳೆ (ಸೋಮವಾರ) ಬೃಹತ್ ಪ್ರತಿಭಟನೆ ನಡೆಸಲು ಆಮ್ ಆದ್ಮಿ ಪಕ್ಷ (ಎಎಪಿ) ನಿರ್ಧಾರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT