ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಸೋಡಿಯಾಗೆ ಸಮನ್ಸ್‌: ಸಿಬಿಐ ಕಚೇರಿಗೆ ಇಂದು ಹಾಜರಾಗುವಂತೆ ಸೂಚನೆ

Last Updated 16 ಅಕ್ಟೋಬರ್ 2022, 21:38 IST
ಅಕ್ಷರ ಗಾತ್ರ

ನವದೆಹಲಿ: ಅಬಕಾರಿ ನೀತಿ ಜಾರಿಯಲ್ಲಿ ಅಕ್ರಮ ಆರೋಪದ ಪ್ರಕರಣದಲ್ಲಿ, ದೆಹಲಿ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಅವರಿಗೆ ಸಿಬಿಐ ಸಮನ್ಸ್ ನೀಡಿದೆ. ತನಿಖೆಗಾಗಿ ಸೋಮವಾರ ಬೆಳಿಗ್ಗೆ 11 ಗಂಟೆಗೆ ಸಿಬಿಐ ಕೇಂದ್ರ ಕಚೇರಿಗೆ ಹಾಜರಾಗುವಂತೆ ಸೂಚಿಸಿದೆ.

‘ನನ್ನ ಮನೆಯಲ್ಲಿ ಸಿಬಿಐ ಅಧಿಕಾರಿಗಳು 14 ತಾಸು ಶೋಧ ನಡೆಸಿದ್ದರು. ಅವರಿಗೆ ಏನೂ ಸಿಕ್ಕಿರಲಿಲ್ಲ. ನನ್ನ ಬ್ಯಾಂಕ್‌ ಲಾಕರ್ ತೆರೆದು ಪರಿಶೀಲಿಸಿದ್ದಾರೆ. ಅಲ್ಲಿಯೂ ಏನೂ ಸಿಕ್ಕಿಲ್ಲ. ನನ್ನ ಗ್ರಾಮದಲ್ಲಿ ಶೋಧ ನಡೆಸಿದ್ದಾರೆ. ಈಗ ನನ್ನನ್ನು ಸಿಬಿಐ ಕೇಂದ್ರ ಕಚೇರಿಗೆ ಕರೆದಿದ್ದಾರೆ. ನಾನು ಹೋಗುತ್ತೇನೆ, ತನಿಖೆಗೆ ಪೂರ್ಣ ಸಹಕಾರ ನೀಡುತ್ತೇನೆ’ ಎಂದು ಸಿಸೋಡಿಯಾ ಅವರು ಟ್ವೀಟ್‌ ಮಾಡಿ ಪ್ರತಿಕ್ರಿಯಿಸಿದ್ದಾರೆ.

ಈ ಪ್ರಕರಣದಲ್ಲಿ ಹಲವು ಜನರನ್ನು ಸಿಬಿಐ ತನಿಖೆಗೆ ಒಳಪಡಿಸಿದೆ. ಇಂಡೊ ಸ್ಪಿರಿಟ್ಸ್ ಮಾಲೀಕ ಸಮೀರ್ ಮಹೇಂದ್ರು, ಗುರುಗ್ರಾಮದ ಬಡಿ ರಿಟೇಲ್‌ ಪ್ರೈವೆಟ್‌ ಲಿ.ನ ನಿರ್ದೇಶಕ ಅಮಿತ್ ಅರೋರಾ, ಇಂಡಿಯಾ ಅಹೆಡ್‌ ನ್ಯೂಸ್‌ನ ಮೂತಾ ಗೌತಮ್‌ ಅವರು ತನಿಖೆಗೆ ಒಳಗಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT