ಭಾನುವಾರ, ನವೆಂಬರ್ 28, 2021
21 °C

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್‌ಗೆ ಡೆಂಗ್ಯೂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದ್ದು, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಏಮ್ಸ್(ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

89 ವರ್ಷದ ಕಾಂಗ್ರೆಸ್ ನಾಯಕನಿಗೆ ಬುಧವಾರ ಸಂಜೆ ಜ್ವರ ಮತ್ತು ಆಯಾಸ ಕಾಣಿಸಿಕೊಂಡಿದ್ದರಿಂದ ಏಮ್ಸ್‌ಗೆ ದಾಖಲಿಸಲಾಗಿತ್ತು.

‘ಸಿಂಗ್‌ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಆದರೆ, ಅವರ ಪ್ಲೇಟ್ಲೆಟ್ ಸಂಖ್ಯೆಯಲ್ಲಿ ಏರಿಕೆ ಕಾಣಿಸುತ್ತಿದ್ದು, ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ’ ಎಂದು ಏಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏಮ್ಸ್‌ ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಸೆಂಟರ್‌ನ ಖಾಸಗಿ ವಾರ್ಡ್‌ನಲ್ಲಿರುವ ಸಿಂಗ್ ಅವರ ಆರೋಗ್ಯದ ಮೇಲೆ ಡಾ.ನಿತೀಶ್ ನಾಯಕ್ ನೇತೃತ್ವದ ಹೃದ್ರೋಗ ತಜ್ಞರ ತಂಡ ನಿಗಾವಹಿಸಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು