ಗುರುವಾರ , ಮೇ 6, 2021
30 °C

ಮನಮೋಹನ್‌, ಕೆಸಿಆರ್‌ಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ/ಹೈದರಾಬಾದ್‌: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಕೋವಿಡ್‌ ದೃಢಪಟ್ಟಿದೆ. 88 ವರ್ಷದ ಸಿಂಗ್‌ ಅವರನ್ನು ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆಗೆ (ಏಮ್ಸ್‌) ಸೋಮವಾರ ದಾಖಲಿಸಲಾಗಿದೆ. 

ಸಿಂಗ್‌ ಅವರಿಗೆ ಸ್ವಲ್ಪ ಜ್ವರ  ಇತ್ತು. ಹಾಗಾಗಿ ಅವರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು ಎಂದು ಕಾಂಗ್ರೆಸ್‌ ಮೂಲಗಳು ಹೇಳಿವೆ. 

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್‌ (ಕೆಸಿಆರ್‌)ಅವರಿಗೂ ಕೋವಿಡ್‌ ದೃಢಪಟ್ಟಿದೆ. ಅವರಿಗೆ ಸೌಮ್ಯ ಸ್ವರೂಪದ ಲಕ್ಷಣಗಳು ಮಾತ್ರ ಇವೆ. ಹಾಗಾಗಿ, ಅವರು ತಮ್ಮ ತೋಟದ ಮನೆಯಲ್ಲಿ ಪ್ರತ್ಯೇಕವಾಸದಲ್ಲಿದ್ದಾರೆ ಎಂದು ಮೂಲಗಳು ಹೇಳಿವೆ. ತೆಲಂಗಾಣ ಮುಖ್ಯಕಾರ್ಯದರ್ಶಿ ಸೋಮೇಶ್‌ ಕುಮಾರ್‌ ಅವರಿಗೂ ಕೆಲ ದಿನಗಳ ಹಿಂದೆ ಕೋವಿಡ್‌ ಬಂದಿತ್ತು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು