ಬುಧವಾರ, ಏಪ್ರಿಲ್ 21, 2021
29 °C
ಸೆ. 14ರಂದು ನಡೆಯಲಿರುವ ಚುನಾವಣೆ

ರಾಜ್ಯಸಭಾ ಉಪಾಧ್ಯಕ್ಷ ಸ್ಥಾನಕ್ಕೆ ಮನೋಜ್ ಝಾ ಅಭ್ಯರ್ಥಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಜ್ಯಸಭಾ ಉಪಾಧ್ಯಕ್ಷ ಸ್ಥಾನಕ್ಕಾಗಿ ಇದೇ 14ರಂದು ನಡೆಯಲಿರುವ ಚುನಾವಣೆಗೆ ಆರ್‌ಜೆಡಿ ನಾಯಕ ಮನೋಜ್ ಝಾ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ವಿವಿಧ ಪಕ್ಷಗಳು ಗುರುವಾರ ನಿರ್ಧರಿಸಿವೆ.

ವಿವಿಧ ಪಕ್ಷಗಳ ಮುಖಂಡರ ಸಮ್ಮುಖದಲ್ಲಿ ಶುಕ್ರವಾರ ಮನೋಜ್ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ಎನ್‌ಡಿಎ ಪರ ಅಭ್ಯರ್ಥಿ ಜೆಡಿಯುನ ಹರಿವಂಶ್ ಅವರ ವಿರುದ್ಧ ಮನೋಜ್ ಸ್ಪರ್ಧಿಸಲಿದ್ದಾರೆ. ಹರಿವಂಶ್ ಅವರು ಈ ಹಿಂದಿನ ಅವಧಿಯಲ್ಲಿ ರಾಜ್ಯಸಭಾ ಉಪಾಧ್ಯಕ್ಷರಾಗಿದ್ದರು.

ರಾಜ್ಯಸಭೆಯ ವಿರೋಧಪಕ್ಷದ ನಾಯಕ ಗುಲಾಂ ನಬಿ ಆಜಾದ್, ಕಾಂಗ್ರೆಸ್ ಉಪನಾಯಕ ಆನಂದ ಶರ್ಮಾ, ಕಾಂಗ್ರೆಸ್ ಮುಖ್ಯ ಸಚೇತಕ ಆರ್.ಎಸ್. ಜೈರಾಂ ರಮೇಶ್, ಟಿಎಂಸಿಯ ಇತರ ನಾಯಕರು ಸೇರಿದಂತೆ ಎಡಪಕ್ಷಗಳು, ಡಿಎಂಕೆ, ಎಎಪಿ ಹಾಗೂ ಇತರ ಪಕ್ಷಗಳ ನಾಯಕರು ಮನೋಜ್ ಝಾ ಅವರು ನಾಮಪತ್ರ ಸಲ್ಲಿಸುವಾಗ ಹಾಜರಿರುವರು ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು