ಸೋಮವಾರ, ಸೆಪ್ಟೆಂಬರ್ 28, 2020
28 °C

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನಂಟ್ ಗವರ್ನರ್ ಮನೋಜ್ ಸಿನ್ಹಾ ಅಧಿಕಾರ ಸ್ವೀಕಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನಂಟ್ ಗವರ್ನರ್ ಆಗಿ ಕೇಂದ್ರದ ಮಾಜಿ ಸಚಿವ ಮನೋಜ್ ಸಿನ್ಹಾ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. 

ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಈ ಹುದ್ದೆ ಅಲಂಕರಿಸಿದ ಮೊದಲ ರಾಜಕೀಯ ನಾಯಕ ಇವರು. ಮುಖ್ಯ ನ್ಯಾಯಮೂರ್ತಿ ಗೀತಾ ಮಿಠ್ಠಲ್ ಅವರು ರಾಜಭವನದಲ್ಲಿ ಅಧಿಕಾರದ ಪ್ರತಿಜ್ಞಾವಿಧಿ ಬೋಧಿಸಿದರು.

'ಆಗಸ್ಟ್ 5, ಜಮ್ಮು ಮತ್ತು ಕಾಶ್ಮೀರದ ಇತಿಹಾಸದಲ್ಲಿ ಪ್ರಮುಖವಾದ ದಿನ. ದೇಶದ ಮುಖ್ಯವಾಹಿನಿಗೆ ಸೇರಿದ ದಿನ. ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಅನೇಕ ಕಾರ್ಯಗಳು ಒಂದು ವರ್ಷದಲ್ಲಿ ಆಗಿರುವುದನ್ನು ನಾನು ಕೇಳಿದ್ದೇನೆ. ಅಭಿವೃದ್ಧಿ ಕಾರ್ಯಗಳನ್ನು ಇನ್ನಷ್ಟು ಚುರುಕುಗೊಳಿಸಲು ನಾನು ಬಯಸುತ್ತೇನೆ' ಎಂದು ಅವರು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು