ಮಂಗಳವಾರ, ಜನವರಿ 18, 2022
22 °C
ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ

ಓಮೈಕ್ರಾನ್: ತುರ್ತು ಸಭೆ ನಡೆಸಲಿರುವ ಕೇಂದ್ರ ಆರೋಗ್ಯ ಸಚಿವ ಮಾಂಡವೀಯ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕೊರೊನಾವೈರಸ್‌ನ ರೂಪಾಂತರಿ ತಳಿಯಾಗಿ ಆತಂಕ ಸೃಷ್ಟಿಸಿರುವ ‘ಓಮೈಕ್ರಾನ್’ ಭಾರತದಲ್ಲೂ ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಶೀಘ್ರವೇ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಬೆಂಗಳೂರು ಮೂಲಕ ಭಾರತಕ್ಕೂ ಎಂಟ್ರಿ ಕೊಟ್ಟ ಓಮೈಕ್ರಾನ್:ಕರ್ನಾಟಕದ ಇಬ್ಬರಲ್ಲಿ ಪತ್ತೆ

ಈಗಾಗಲೇ ಎಲ್ಲ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ತಪಾಸಣೆ ಕೇಂದ್ರಗಳನ್ನು ಹೆಚ್ಚಿಸಲಾಗಿದ್ದು, ವಿದೇಶಗಳಿಂದ ಬರುವವರು ಕಡ್ಡಾಯವಾಗಿ 14 ದಿನಗಳ ಟ್ರಾವೆಲ್ ಹಿಸ್ಟರಿಯನ್ನು ಮತ್ತು ಕೋವಿಡ್ ನೆಗೆಟಿವ್ ವರದಿಯನ್ನು ಒದಗಿಸಬೇಕು ಎಂದು ಸಚಿವರು ಆದೇಶಿಸಿದ್ಧಾರೆ.

ಓಮೈಕ್ರಾನ್ ವಿಷಯವಾಗಿ ಹಾಗೂ ಅಂತರರಾಷ್ಟ್ರಿಯ ವಿಮಾನ ನಿಲ್ದಾಣಗಳಲ್ಲಿನ ಸದ್ಯದ ಪರಿಸ್ಥಿತಿಯನ್ನು ಸಭೆಯಲ್ಲಿ ಮಾಂಡವೀಯ ಪರಿಶೀಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಓದಿ

ಓಮೈಕ್ರಾನ್ ಆತಂಕ: ಹೆದರುವ ಅವಶ್ಯಕತೆ ಇಲ್ಲವೆಂದ ಕೇಂದ್ರ ಆರೋಗ್ಯ ಇಲಾಖೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು