ಮಂಗಳವಾರ, ಸೆಪ್ಟೆಂಬರ್ 28, 2021
22 °C

ಉಚಿತ ಲಸಿಕೆ ನೀಡಿಕೆಯಿಂದ ಚುರುಕುಪಡೆದ ಅಭಿಯಾನ: ಆರೋಗ್ಯ ಸಚಿವ ಮನಸುಖ್ ಮಾಂಡವಿಯ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಎಲ್ಲರಿಗೂ ಉಚಿತ ಲಸಿಕೆ ಅಭಿಯಾನದಿಂದಾಗಿ ಕೋವಿಡ್ ಲಸಿಕೆ ನೀಡಿಕೆಯು ವೇಗ ಪಡೆದುಕೊಂಡಿದ್ದು 24 ದಿನಗಳಲ್ಲಿ 30ರಿಂದ 40 ಕೋಟಿ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯ ತಿಳಿಸಿದ್ದಾರೆ.

ಮೊದಲ ಹಂತದ ಲಸಿಕಾ ಅಭಿಯಾನದಲ್ಲಿ 10 ಕೋಟಿ ಜನರಿಗೆ ಲಸಿಕೆ ನೀಡಲು 85 ದಿನಗಳಾಗಿತ್ತು ಎಂದು ಅವರು ಹೇಳಿದ್ದಾರೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಅಭಿಯಾನವು ಜೂನ್ 21ರಂದು ಆರಂಭವಾಗಿತ್ತು.

ಲಸಿಕೆ ಲಭ್ಯತೆ ಹೆಚ್ಚಿಸುವ ಮೂಲಕ ಅಭಿಯಾನಕ್ಕೆ ವೇಗ ನೀಡಲಾಯಿತು. ಎಷ್ಟು ಲಸಿಕೆ ದೊರೆಯಬಹುದು ಎಂಬುದನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮುಂಚಿತವಾಗಿ ತಿಳಿಸಿದ್ದರಿಂದ ಸರಿಯಾದ ಯೋಜನೆ ರೂಪಿಸಲು ನೆರವಾಯಿತು ಎಂದು ಅವರು ಹೇಳಿದ್ದಾರೆ.

ಆರೋಗ್ಯ ಸಚಿವಾಲಯದ ದತ್ತಾಂಶಗಳ ಪ್ರಕಾರ ದೇಶದಾದ್ಯಂತ ಸೋಮವಾರ ಬೆಳಗ್ಗಿನ ವರೆಗೆ 40.64 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ.

‘ವಿಶ್ವದ ಅತಿ ದೊಡ್ಡ ಲಸಿಕಾ ಅಭಿಯಾನವು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹೊಸ ಆಯಾಮಗಳನ್ನು ಸೃಷ್ಟಿಸುತ್ತಿದೆ’ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು