ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಪುರ್ ಜಿಲ್ಲೆಯಲ್ಲಿ ಬಾಯ್ಲರ್ ಸ್ಫೋಟ: 9 ಮಂದಿ ಸಾವು, 19 ಮಂದಿಗೆ ಗಾಯ

Last Updated 4 ಜೂನ್ 2022, 15:57 IST
ಅಕ್ಷರ ಗಾತ್ರ

ಹಾಪುರ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಕಾರ್ಖಾನೆಯೊಂದರಲ್ಲಿ ಶನಿವಾರ ಮಧ್ಯಾಹ್ನ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ಒಂಬತ್ತು ಕಾರ್ಮಿಕರು ಮೃತಪಟ್ಟಿದ್ದು 19 ಮಂದಿ ಗಾಯಗೊಂಡಿದ್ದಾರೆ.

ಘಟನೆ ನಡೆದಾಗ ಧೋಲಾನಾದ ಯುಪಿಎಸ್‌ಐಡಿಸಿ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಸುಮಾರು 30 ಜನರಿದ್ದರು. ಸ್ಫೋಟದ ತೀವ್ರತೆಗೆ ಕೈಗಾರಿಕಾ ಪ್ರದೇಶದ ಹಲವು ಕಾರ್ಖಾನೆಗಳ ಛಾವಣಿಗಳು ಹಾನಿಗೊಂಡಿವೆ. ಬೆಂಕಿ ನಂದಿಸಲು ಅಗ್ನಿ ಶಾಮಕ ದಳಕ್ಕೆ ಮೂರು ತಾಸು ಬೇಕಾಯಿತು. ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ. ಘಟನೆ ಕುರಿತು ತಜ್ಞರಿಂದ ತನಿಖೆ ನಡೆಸುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೂಚಿಸಿದ್ದಾರೆ.

ಘಟನೆ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ದುರಂತ ಹೃದಯ ವಿದ್ರಾವಕವಾಗಿದೆ. ರಾಜ್ಯ ಸರ್ಕಾರ ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ಮತ್ತು ನೆರವು ನೀಡಲು ಸಿದ್ಧವಿದೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT