ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶದಲ್ಲಿ ಹಠಾತ್‌ ಪ್ರವಾಹ, ಭೂಕುಸಿತ: 33 ಮಂದಿ ಸಾವು

Last Updated 21 ಆಗಸ್ಟ್ 2022, 5:00 IST
ಅಕ್ಷರ ಗಾತ್ರ

ಶಿಮ್ಲಾ: ‘ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಉಂಟಾದ ಹಠಾತ್ ಪ್ರವಾಹ ಮತ್ತು ಭೂಕುಸಿತದ ಪ್ರತ್ಯೇಕ ಘಟನೆಗಳಲ್ಲಿ 33 ಮಂದಿ ಸಾವಿಗೀಡಾಗಿದ್ದು, 10 ಮಂದಿ ಗಾಯಗೊಂಡಿದ್ದಾರೆ’ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ನಿರ್ದೇಶಕ ಸುದೇಶ್ ಕುಮಾರ್ ಮೊಖ್ತಾ ಶನಿವಾರ ತಿಳಿಸಿದ್ದಾರೆ.

‘ಭಾರಿ ಮಳೆಗೆ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಚಕ್ಕಿ ಸೇತುವೆ ಕುಸಿದ ಹಿನ್ನೆಲೆ ಯಲ್ಲಿ ಪಠಾಣ್‌ ಕೋಟ್ ಮತ್ತು ಜೋಗಿಂದರ್‌ನಗರ ನಡುವಿನ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಳೆಯಿಂದ ಉಂಟಾದ ಪ್ರವಾಹ, ಭೂಕುಸಿತ, ಮನೆಕುಸಿತ ಪ್ರಕರಣಗಳಲ್ಲಿ ಉತ್ತರಾಖಂಡ ಮತ್ತು ಒಡಿಶಾದಲ್ಲಿ ತಲಾ ನಾಲ್ವರು, ಜಾರ್ಖಂಡ್‌ನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ‘ಉತ್ತರಾಖಂಡದ ವಿವಿಧ ಭಾಗಗಳಲ್ಲಿ ಶನಿವಾರ ಬೆಳಿಗ್ಗೆ 2:15ಕ್ಕೆ ಮೇಘಸ್ಫೋಟ ಸಂಭವಿಸಿದ್ದು ಡೆಹ್ರಾಡೂನ್‌ನಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವೈಷ್ಣೋದೇವಿ ದೇಗುಲ ಪುನರಾರಂಭ
(ಜಮ್ಮು ಮತ್ತು ಕಾಶ್ಮೀರ)
: ‘ಭಾರಿ ಮಳೆಯ ಕಾರಣದಿಂದ ಶುಕ್ರವಾರ ಸಂಜೆ ತಾತ್ಕಾಲಿಕವಾಗಿ ಸ್ಥಗಿತ ಗೊಂಡಿದ್ದ ಪ್ರಸಿದ್ಧ ಮಾತಾ ವೈಷ್ಣೋದೇವಿ ದೇವಾಲಯವು, ಶನಿವಾರ ಬೆಳಿಗ್ಗೆ ಯಿಂದ ಪುನರಾರಂಭಗೊಂಡಿದೆ’ ಎಂದು ಅಧಿಕಾರಿಗಳು ತಿಳಿಸಿದರು.

ಅಸ್ಸಾಂನಲ್ಲಿ ಮನೆಗಳಿಗೆ ಹಾನಿ (ಗುವಾಹಟಿ ವರದಿ): ಈ ವರ್ಷ ದಲ್ಲಿ ಅಸ್ಸಾಂನಲ್ಲಿ ಸಂಭವಿಸಿದ ಪ್ರವಾಹದಿಂದಾಗಿ 2.04 ಲಕ್ಷಕ್ಕೂ ಅಧಿಕ ಮನೆಗಳು ಹಾನಿಗೀಡಾಗಿದ್ದು, 309 ಕುಟುಂಬಗಳ ಮನೆಗಳು ಸಂಪೂರ್ಣ ವಾಗಿ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ.

ಮನೆ ಕಳೆದುಕೊಂಡವರು ಪುನಃ ಮನೆ ನಿರ್ಮಿಸಲು, ಅಸ್ಸಾಂ ಸರ್ಕಾರವು ಫಲಾನುಭವಿ ಕುಟುಂಬಗಳಿಗೆ ಹಣ ಕಾಸಿನ ನೆರವು ವಿತರಿಸಿತು.

ಪರಿಹಾರ ವಿತರಣಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ ಅವರು ಉದ್ಘಾಟಿಸಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT