ಮಂಗಳವಾರ, ಜೂನ್ 22, 2021
29 °C

ಉತ್ತರ ಪ್ರದೇಶ: ಅಪಘಾತದಲ್ಲಿ 16 ಜನರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕಾನ್ಪುರ: ಇಲ್ಲಿನ ಸಚೆಂಡಿ ಪ್ರದೇಶದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್‌ನಲ್ಲಿದ್ದ 16 ಜನರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೇಗವಾಗಿ ಬರುತ್ತಿದ್ದ ಬಸ್‌, ಜೆಸಿಬಿಗೆ ಡಿಕ್ಕಿ ಹೊಡೆದ ಪರಿಣಾಮ ಹೆದ್ದಾರಿಯ ಇನ್ನೊಂದು ಬದಿಗೆ ಪಲ್ಟಿ ಹೊಡೆದು ಕಂದಕಕ್ಕೆ ಬಿದ್ದಿದೆ ಎಂದು ಕಾನ್ಪುರ ಹೊರವಲಯದ ಪೊಲೀಸ್‌ ವರಿಷ್ಠಾಧಿಕಾರಿ ಅಶ್ತ್‌ಬುಜಾ ಪ್ರಸಾದ್‌ ಸಿಂಗ್‌ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು