ಭಾನುವಾರ, ಜೂನ್ 26, 2022
26 °C

ಉತ್ತರಾಖಂಡ: ಚಾರ್‌ ಧಾಮ್‌ ಯಾತ್ರೆಯಲ್ಲಿ ಮೃತಪಟ್ಟವರ ಸಂಖ್ಯೆ 57ಕ್ಕೆ ಏರಿಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಈ ವರ್ಷದ ಚಾರ್ ಧಾಮ್ ಯಾತ್ರೆ ಕೈಗೊಂಡಿರುವ ಯಾತ್ರಾರ್ಥಿಗಳ ಪೈಕಿ ಈವರೆಗೆ 57 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿತ ಸಮಸ್ಯೆ ಹಾಗೂ ಮೌಂಟೇನ್ ಸಿಕ್‌ನೆಸ್ ತೊಂದರೆಗಳು ಇಂತಹ  ಸಾವಿಗೆ ಕಾರಣ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 3ರಿಂದ ಚಾರ್ ಧಾಮ್ ಯಾತ್ರೆ ಆರಂಭವಾಗಿದ್ದು, ಈವರೆಗೆ 57 ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸೇವೆಗಳ ನಿರ್ದೇಶನಾಲಯದ ಡಾ. ಶೈಲಜಾ ಭಟ್ ಮಾಹಿತಿ ನೀಡಿದ್ದಾರೆ.

ಓದಿ...  ಪರಶುರಾಮ ಕುಂಡ್‌ಗೆ ರೈಲ್ವೆ ಸಂಪರ್ಕ: ಅಮಿತ್ ಶಾ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು