ಭಾನುವಾರ, ಜೂನ್ 26, 2022
22 °C

ಶ್ರೀನಗರ: ಬೀದಿ ನಾಯಿಗಳ ದಾಳಿ, 17 ಪ್ರವಾಸಿಗರು ಸೇರಿ 39 ಮಂದಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶ್ರೀನಗರ: ಇಲ್ಲಿನ ದಲ್‌ಗೇಟ್‌ ಪ್ರದೇಶದಲ್ಲಿ ಬೀದಿ ನಾಯಿಗಳ ದಾಳಿಗೆ 19 ಪ್ರವಾಸಿಗರು ಸೇರಿ 39 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಶ್ರೀನಗರದ ಶ್ರೀಮಹಾರಾಜ ಹರಿಸಿಂಗ್‌ (ಎಸ್‌ಎಂಎಚ್‌ಎಸ್‌) ಆಸ್ಪತ್ರೆಗೆ ದಾಖಲಿಸಲಾಗಿದೆ.

ದಲ್‌ಗೇಟ್‌ನ ಘಾಟ್‌ ನಂ.5ರ ಬುಚ್ವಾರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಬೀದಿ ನಾಯಿಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

 ‘ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಆರೋಗ್ಯ ಸ್ಥಿರವಾಗಿದೆ’ ಎಂದು ಎಸ್‌ಎಂಎಚ್‌ಎಸ್‌ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಕನ್ವಾಲ್‌ಜೀತ್ ಸಿಂಗ್ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು