ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಅಗ್ನಿ ಅವಘಡ; ಕನಿಷ್ಠ 90 ವಾಹನಗಳಿಗೆ ಹಾನಿ

Last Updated 8 ಜೂನ್ 2022, 6:39 IST
ಅಕ್ಷರ ಗಾತ್ರ

ನವದೆಹಲಿ: ಆಗ್ನೇಯ ದೆಹಲಿಯ ಜಾಮಿಯಾ ನಗರದ ಮೆಟ್ರೊ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 90 ವಾಹನಗಳಿಗೆ ಹಾನಿಯಾಗಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜಾಮಿಯ ನಗರದ ಟಿಕೋನಾ ಪಾರ್ಕ್‌ನಲ್ಲಿ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆಮುಂಜಾನೆ5 ಗಂಟೆ ಸುಮಾರಿಗೆ ಕರೆ ಬಂದಿದೆ. 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದು ದೆಹಲಿಯ ಅಗ್ನಿ ಶಾಮಕ ಸೇವೆಗಳ ನಿರ್ದೇಶಕ ಅತುಲ್ ಗಾರ್ಗ್ ತಿಳಿಸಿದ್ದಾರೆ.

ಬೆಂಕಿಯಲ್ಲಿ ಹಲವು ವಾಹನಗಳು ಸುಟ್ಟು ಭಸ್ಮವಾಗಿದ್ದು, ಕನಿಷ್ಠ 90ರಷ್ಟು ವಾಹನಗಳಿಗೆ ಹಾನಿಯಾಗಿದೆ. ಇದರಲ್ಲಿ 10 ಕಾರುಗಳು, 1 ಬೈಕ್, 2 ಸ್ಕೂಟರ್, 30 ಹೊಸ ಎಲೆಕ್ಟ್ರಿಕ್ ರಿಕ್ಷಾ ಹಾಗೂ 50 ಹಳೆಯ ಇ-ರಿಕ್ಷಾಗಳು ಸೇರಿವೆ.

ಅಗ್ನಿ ಅವಘಡಕ್ಕೆ ಹಿಂದಿನ ಕಾರಣ ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT