ಲತೇಹರ್: ಹಲವು ಪ್ರಕರಣಗಳಲ್ಲಿ ಪೊಲೀಸರು ಹುಡುಕುತ್ತಿದ್ದ ಸಿಪಿಐ(ಮಾವೋವಾದಿ) ಕಮಾಂಡರ್ನನ್ನು ಜಾರ್ಖಂಡ್ನ ಲತೇಹರ್ ಜಿಲ್ಲೆಯ ಕಾಡಿನಲ್ಲಿ ಶನಿವಾರ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಂಧಿತ ಮಾವೋವಾದಿ ಕಿಶೋರ್ ಸಿಂಗ್ ಮುಂಬರುವ ಪಂಚಾಯತ್ ಚುನಾವಣೆಗೆ ಮುಂಚಿತವಾಗಿ ಭದ್ರತಾ ಸಿಬ್ಬಂದಿ ಮೇಲೆ ದಾಳಿ ಮಾಡುವ ಉದ್ದೇಶದಿಂದ ಅವರ ಚಲನವಲನದ ಮೇಲೆ ನಿಗಾ ಇಟ್ಟಿದ್ದನು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಂಜನಿ ಅಂಜನ್ ಹೇಳಿದ್ದಾರೆ. ಈತನ ತಲೆಗೆ ಸರ್ಕಾರ ₹ 5 ಲಕ್ಷ ಬಹುಮಾನ ಘೋಷಣೆ ಮಾಡಿತ್ತು.

ಪೊಲೀಸ್ ವರಿಷ್ಠಾಧಿಕಾರಿ ವಿಪುಲ್ ಪಾಂಡೆ ನೇತೃತ್ವದ ಪೊಲೀಸ್ ತಂಡ, ಕುಮುಡಿಹ್ ಹಳ್ಳಿಯ ಸಮೀಪದ ಆಂಟಿಖೇಟಾ ಕಾಡಿನಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ಸಂದರ್ಭ ಪೊಲೀಸರನ್ನು ಕಂಡು ಓಡಿ ಹೋಗಲು ಯತ್ನಿಸಿದ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿತ್ತು.

ಬಂಧಿತ ವ್ಯಕ್ತಿ ತಾನು ಸಿಪಿಐ (ಮಾವೋವಾದಿ) ನ ಉಪ ವಲಯದ ಕಮಾಂಡರ್ ಕಿಶೋರ್ ಸಿಂಗ್ ಎಂದು ಗುರುತು ಹೇಳಿಕೊಂಡಿದ್ದಾನೆ.

ರಾಜ್ಯದಲ್ಲಿ ಮುಂಬರುವ ಪಂಚಾಯತ್ ಚುನಾವಣೆಯ ದೃಷ್ಟಿಯಿಂದ ಮಾವೋವಾದಿಗಳು ಸಕ್ರಿಯವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಂಗ್ ವಿರುದ್ಧ ಲತೇಹರ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ 13 ಕ್ಕೂ ಅಧಿಕ ಪ್ರಕರಣಗಳಿವೆ. ಇದರಲ್ಲಿ ಗರು ಬ್ಲಾಕ್ ಅಭಿವೃದ್ಧಿ ಅಧಿಕಾರಿಯ ಅಪಹರಣ ಮತ್ತು ಸುಲಿಗೆ ಪ್ರಕರಣಗಳೂ ಸೇರಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.