ಬುಧವಾರ, ಅಕ್ಟೋಬರ್ 28, 2020
21 °C

ತಂಡದ ಸದಸ್ಯರಿಂದಲೇ ಹಿರಿಯ ಮಾವೋವಾದಿ ನಾಯಕನ ಹತ್ಯೆ

ಎಎನ್ಐ Updated:

ಅಕ್ಷರ ಗಾತ್ರ : | |

ಬಿಜಾಪುರ (ಛತ್ತೀಸಗಡ): ಬಿಜಾಪುರ ಜಿಲ್ಲೆಯಲ್ಲಿ ನಡೆದ ಅನೇಕ ಹತ್ಯೆಗಳ ಹಿಂದಿದ್ದ ಹಿರಿಯ ಮಾವೋವಾದಿ ನಾಯಕನನ್ನು ಅವನ ತಂಡದ ಸದಸ್ಯರೇ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಗಂಗಲೂರು ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಹತ್ಯೆಗಳಿಗೆ ಕಾರಣನಾಗಿದ್ದ ಆತನನ್ನು ಹುಡುಕಿಕೊಟ್ಟವರಿಗೆ ₹ 8 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.

ಬಿಜಾಪುರ ಜಿಲ್ಲೆಯಲ್ಲಿ ವಿಭಾಗೀಯ ಸಮಿತಿ ಸದಸ್ಯ ಮೋಡಿಯಂ ವಿಜ್ಜಾ ಎಂಬಾತನನ್ನು ಆತನ ಗಂಗಲೂರು ಪ್ರದೇಶ ಸಮಿತಿಗೆ ಸೇರಿದ ಸದಸ್ಯರೇ ಹತ್ಯೆ ಮಾಡಿದ್ದಾರೆ. ಪಶ್ಚಿಮ ಬಸ್ತಾರ್ ವಿಭಾಗೀಯ ಪ್ರದೇಶದಲ್ಲಿ ನಡೆದ ಹೆಚ್ಚಿನ ನಾಗರಿಕ ಹತ್ಯೆಗಳ ಹಿಂದೆ ವಿಜ್ಜಾ ಕೈವಾಡ ಇತ್ತು ಎಂದು ಛತ್ತೀಸಗಡದ ಬಸ್ತಾರ್ ಪ್ರದೇಶದ ಐಜಿಪಿ ಪಿ. ಸುಂದರ್‌ರಾಜ್ ತಿಳಿಸಿದ್ದಾರೆ.

ಮುಗ್ಧ ಬುಡಕಟ್ಟು ಜನಾಂಗದವರ ವಿರುದ್ಧ ಬುದ್ದಿಹೀನ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಿರಿಯ ಕಾರ್ಯಕರ್ತರು ಮತ್ತು ಸ್ಥಳೀಯ ಕಾರ್ಯಕರ್ತರಲ್ಲಿ ಸಾಕಷ್ಟು ಭಿನ್ನಾಭಿಪ್ರಾಯವಿದೆ ಎಂದು ತಿಳಿಸಿದ್ದಾರೆ.

ದಕ್ಷಿಣ ಬಸ್ತಾರ್ ಪ್ರದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ನಾಗರಿಕ ಹತ್ಯೆಗಳ ಹಿನ್ನೆಲೆಯಲ್ಲಿ ಇದು ಬಹಳ ಮುಖ್ಯವಾದ ಬೆಳವಣಿಗೆಯಾಗಿದೆ. ಈ ಕುರಿತಾಗಿ ತನಿಖೆ ಕೈಗೊಳ್ಳಲಾಗಿದೆ ಎಂದು ಇನ್ಸ್‌ಪೆಕ್ಟರ್ ಜನರಲ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು