ಮಂಗಳವಾರ, ಮಾರ್ಚ್ 2, 2021
19 °C

ಮರಾಠರಿಗೆ ಮೀಸಲಾತಿ: ಫೆ.5 ರಂದು ಅರ್ಜಿ ವಿಚಾರಣೆಗೆ ವೇಳಾಪಟ್ಟಿ ನಿಗದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮಹಾರಾಷ್ಟ್ರದಲ್ಲಿ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ ನೀಡುವ 2018ರ ಕಾನೂನಿಗೆ ಸಂಬಂಧಿಸಿದ ಅರ್ಜಿ ವಿಚಾರಣೆಯ ವೇಳಾಪಟ್ಟಿಯನ್ನು ಫೆಬ್ರುವರಿ 5 ರಂದು ತೀರ್ಮಾನಿಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

‘ಈ ರೀತಿಯ ಪ್ರಕರಣಗಳನ್ನು ನೇರ ವಿಚಾರಣೆ ಪ್ರಾರಂಭವಾದ ಬಳಿಕ ಆಲಿಸುವುದು ಉತ್ತಮ’ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿತ್ತು.

ಆದರೆ ಸದ್ಯ ಸುಪ್ರೀಂಕೋರ್ಟ್‌, ಕೊರೊನಾ ಪಿಡುಗಿನಿಂದಾಗಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ವರ್ಚುವಲ್‌ ವಿಚಾರಣೆಯನ್ನು ನಡೆಸುತ್ತಿದೆ.

ಈ ಅರ್ಜಿ ಸಂಬಂಧ ವಿಚಾರಣೆಯನ್ನು ಮಾರ್ಚ್‌ನಲ್ಲಿ ನಡೆಸುವಂತೆ ಮಹಾರಾಷ್ಟ್ರ ಸರ್ಕಾರವು ನ್ಯಾಯಮೂರ್ತಿ ಅಶೋಕ್‌ ಭೂಷಣ್‌ ಅವರ ನೇತೃತ್ವದ ಐದು ಸದಸ್ಯರ ವಿಸ್ತ್ರೃತ ಪೀಠಕ್ಕೆ ಮನವಿ ಮಾಡಿದೆ.

‘ಈ ರೀತಿಯ ಅರ್ಜಿಯನ್ನು ನೇರವಾಗಿ ವಿಚಾರಣೆ ನಡೆಸುವುದು ಉತ್ತಮವಾಗಿರುತ್ತದೆ. ಆದರೆ ಈ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾಗುವುದು ಅಪಾಯಕರ. ಹಾಗಾಗಿ ಅರ್ಜಿ ವಿಚಾರಣೆಯನ್ನು ಮುಂದೂಡುವಂತೆ’ ಮಹಾರಾಷ್ಟ್ರ ಸರ್ಕಾರದ ಪರ ವಕೀಲ ಮುಕುಲ್‌ ರೋಹಟಗಿ ಅವರು ಮನವಿ ಮಾಡಿದ್ದಾರೆ.

‘ದೇಶದಲ್ಲಿ ಈಗಾಗಲೇ ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಿದೆ. 60 ವರ್ಷ ಮೇಲ್ಪಟ್ಟ ನ್ಯಾಯಮೂರ್ತಿಗಳು  ಮತ್ತು ನ್ಯಾಯಾಧೀಶರಿಗೆ ಲಸಿಕೆ ನೀಡಲು ಆರರಿಂದ 8 ವಾರಗಳು ತೆಗೆದುಕೊಳ್ಳಬಹುದು. ಹಾಗಾಗಿ ಈ ಅರ್ಜಿ ವಿಚಾರಣೆಯನ್ನು ಮಾರ್ಚ್‌ ತಿಂಗಳಿಗೆ ಮುಂದೂಡಬೇಕು’ ಎಂದು ಮಹಾರಾಷ್ಟ್ರ ಸರ್ಕಾರ ಮನವಿ ಮಾಡಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ಪೀಠವು, ಅರ್ಜಿಯ ವಿಚಾರಣೆ ಯಾವಾಗ ನಡೆಸಬೇಕು ಎಂಬುದರ ಬಗ್ಗೆ ಎರಡು ವಾರಗಳ ಬಳಿಕ ತಿಳಿಸುವುದಾಗಿ ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು