ಭಾನುವಾರ, ಮೇ 29, 2022
22 °C

ಶರದ್‌ ಪವಾರ್‌ ವಿರುದ್ಧ ಅವಹಳೇನಕಾರಿ ಪೋಸ್ಟ್‌: ಮರಾಠಿ ನಟಿ ಚಿತಳೆ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಠಾಣೆ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿರುವ ಆರೋಪದ ಮೇಲೆ ಮರಾಠಿ ನಟಿ ಕೇತಕಿ ಚಿತಳೆ ಅವರನ್ನು ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಮರಾಠಿ ಭಾಷೆಯಲ್ಲಿರುವ ಈ ಪೋಸ್ಟ್‌ ಅನ್ನು ಚಿತಳೆ ಅವರು ಶುಕ್ರವಾರ ಹಂಚಿಕೊಂಡಿದ್ದರು. ಪವಾರ್ ಹೆಸರನ್ನು ನಮೂದಿಸಿರುವ ಚಿತಳೆ ‘ನಿಮಗೆ ನರಕ ಕಾಯುತ್ತಿದೆ’ ಎಂದು ಬರೆಯಲಾಗಿದೆ. ‘ನೀವು ಬ್ರಾಹ್ಮಣರನ್ನು ದ್ವೇಷಿಸುತ್ತೀರಿ’ ಎಂದೂ ಆರೋಪಿಸಲಾಗಿದೆ. 

ಶಿವಸೇನೆ ಮತ್ತು ಕಾಂಗ್ರೆಸ್‌ ಜೊತೆಗೆ ಮಹಾರಾಷ್ಟ್ರದಲ್ಲಿ ಅಧಿಕಾರವನ್ನು ಹಂಚಿಕೊಂಡಿರುವ ಪವಾರ್ ಅವರನ್ನು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಸ್ವಪ್ನಿಲ್ ನೆಟ್ಕೆ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಕಲ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿತಳೆ ಅವರನ್ನು ಶನಿವಾರ ಬಂಧಿಸಲಾಗಿದೆ. 

ಪುಣೆಯಲ್ಲೂ ಚಿತಳೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎನ್‌ಸಿಪಿ ಪೊಲೀಸರಿಗೆ ಮನವಿ ಸಲ್ಲಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು