ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪರಾಷ್ಟ್ರಪತಿ ಚುನಾವಣೆ: ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್‌ ಆಳ್ವ ಕಣಕ್ಕೆ

Last Updated 17 ಜುಲೈ 2022, 13:31 IST
ಅಕ್ಷರ ಗಾತ್ರ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಜಗದೀಪ್‌ ಧನಕರ್‌ ವಿರುದ್ಧ ಹಿರಿಯ ಕಾಂಗ್ರೆಸ್‌ ನಾಯಕಿಮಾರ್ಗರೇಟ್‌ ಆಳ್ವ ಅವರನ್ನು ಅಭ್ಯರ್ಥಿಯನ್ನಾಗಿ ಪ್ರತಿಪಕ್ಷಗಳು ಘೋಷಣೆ ಮಾಡಿವೆ.

ಉತ್ತರಾಖಂಡ, ರಾಜಸ್ಥಾನ, ಗುಜರಾತ್‌ ಮತ್ತು ಗೋವಾದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿರುವ ಮಾರ್ಗರೇಟ್‌ ಆಳ್ವ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿ ಎಂದು ಎನ್‌ಸಿಪಿ ಮುಖಂಡ ಶರದ್‌ ಪವಾರ್‌ ಘೋಷಿಸಿದ್ದಾರೆ.

ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ಕುರಿತು ನಡೆದ ಸಭೆಯಲ್ಲಿ 17 ಪಕ್ಷಗಳು ಹಾಜರಿದ್ದವು. ತೃಣಮೂಲ ಕಾಂಗ್ರೆಸ್‌ನ ಮಮತಾ ಬ್ಯಾನರ್ಜಿ ಮತ್ತು ಎಎಪಿಯ ಅರವಿಂದ ಕೇಜ್ರಿವಾಲ್‌ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಕಳೆದ ಬಾರಿ ನಮ್ಮ ಅಭ್ಯರ್ಥಿಯನ್ನು ಬೆಂಬಲಿಸಿದ್ದರು ಎಂದು ಶರದ್‌ ಪವಾರ್‌ ತಿಳಿಸಿದ್ದಾರೆ.

ಮಾರ್ಗರೇಟ್‌ ಅವರ ಹೆಸರು ಘೋಷಣೆಯಾದ ಬೆನ್ನಲ್ಲೇ ನಾವೆಲ್ಲರೂ ಜೊತೆಗಿದ್ದೇವೆ ಎಂದು ಶಿವಸೇನಾ ಮುಖಂಡ ಸಂಜಯ್‌ ರಾವುತ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT