ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್‌ನಲ್ಲಿ ಮಸೀದಿ ನೆಲಸಮ: ಸ್ಥಳೀಯ ಮುಸ್ಲಿಮರಿಂದ ಪ್ರತಿಭಟನೆ

Last Updated 3 ಆಗಸ್ಟ್ 2022, 2:43 IST
ಅಕ್ಷರ ಗಾತ್ರ

ಹೈದರಾಬಾದ್: ನಗರದ ಹೊರವಲಯದ ಶಂಶಾಬಾದ್‌ನಲ್ಲಿ ನಿರ್ಮಿಸಲಾಗಿದ್ದ ಮಸೀದಿಯೊಂದನ್ನು ನಗರಪಾಲಿಕೆ ಅಧಿಕಾರಿಗಳು ನೆಲಸಮಗೊಳಿಸಿದ್ದು, ಸ್ಥಳೀಯ ಮುಸ್ಲಿಮರು ಪ್ರತಿಭಟನೆ ನಡೆಸಿದ್ದಾರೆ.

ಗ್ರೀನ್ ಅವಿನ್ಯೂ ಕಾಲನಿಯಲ್ಲಿ ನಿರ್ಮಿಸಲಾಗಿದ್ದ ಮಸ್ಜಿದ್–ಇ–ಖಾಜಾ ಮಹ್ಮೂದ್ ಮಸೀದಿಯನ್ನು ನಗರಪಾಲಿಕೆ ಅಧಿಕಾರಿಗಳು, ಬಿಗಿ ಪೊಲೀಸ್ ಭದ್ರತೆಯಲ್ಲಿ ಮಂಗಳವಾರ ಬೆಳಗ್ಗೆ ನೆಲಸಮ ಮಾಡಿದ್ದಾರೆ.

ಮಸೀದಿ ನೆಲಸಮ ಕಾರ್ಯಾಚರಣೆಯನ್ನು ವಿರೋಧಿಸಿ ಆಲ್ ಇಂಡಿಯಾ ಮಜ್ಲಿಸ್–ಇ–ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮತ್ತು ಮಜ್ಲಿಸ್ ಬಚಾವೊ ತೆಹ್ರೀಕ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಮಸೀದಿಯನ್ನು ನಿಗದಿತವಲ್ಲದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಗ್ರೀನ್ ಅವಿನ್ಯೂ ಕಾಲನಿಯ ನಿವಾಸಿಗಳು ಶಂಶಾಬಾದ್ ನಗರಪಾಲಿಕೆಗೆ ದೂರು ನೀಡಿದ್ದರು.

ಮಸೀದಿಯನ್ನು ಅನಧಿಕೃತವಾಗಿ ನಿರ್ಮಿಸಿರುವ ಕುರಿತು ದೂರು ಬಂದ ಬಳಿಕ, ಪಾಲಿಕೆ ಅಧಿಕಾರಿಗಳು ನೆಲಸಮ ಮಾಡುವ ಕಾರ್ಯಾಚರಣೆ ನಡೆಸಿದ್ದರು. ಆದರೆ, ಪಾಲಿಕೆ ಕಾರ್ಯಾಚರಣೆಗೆ ಸ್ಥಳೀಯ ಮುಸ್ಲಿಮರು ವಿರೋಧ ವ್ಯಕ್ತಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT