ಸೋಮವಾರ, ಸೆಪ್ಟೆಂಬರ್ 26, 2022
24 °C

ಕೋವಿಡ್ ಹೆಚ್ಚಳ: ದೆಹಲಿಯಲ್ಲಿ ಮಾಸ್ಕ್ ಕಡ್ಡಾಯ, ಉಲ್ಲಂಘನೆಗೆ ₹ 500 ದಂಡ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ರಾಜಧಾನಿ ದೆಹಲಿಯಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ನಿಯಮ ಮೀರಿದರೆ ₹ 500 ದಂಡ ವಿಧಿಸುವುದಾಗಿ ಸರ್ಕಾರ ಆದೇಶ ಹೊರಡಿಸಿದೆ.

ಖಾಸಗಿ ನಾಲ್ಕು ಚಕ್ರದ ವಾಹನಗಳಲ್ಲಿ ಪ್ರಯಾಣಿಸುವವವರಿಗೆ ದಂಡವು ಅನ್ವಯಿಸುವುದಿಲ್ಲ ಎಂದು ಅಧಿಸೂಚನೆಯ ನಿಬಂಧನೆಯಲ್ಲಿ ತಿಳಿಸಲಾಗಿದೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.

ಬುಧವಾರ, ದೆಹಲಿಯಲ್ಲಿ ಕೋವಿಡ್‌ನಿಂದ 8 ಸಾವು ಸಂಭವಿಸಿವೆ. ಸುಮಾರು 180 ದಿನಗಳಲ್ಲೇ ಇದು ಅತ್ಯಧಿಕ ಸಾವಿನ ಸಂಖ್ಯೆಯಾಗಿದೆ. 2,146 ಹೊಸ ಪ್ರಕರಣಗಳು ಮತ್ತು ಶೇಕಡ 17.83 ರಷ್ಟು ದೈನಂದಿನ ಪಾಸಿಟಿವಿಟಿ ದರ ದಾಖಲಾಗಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 8,205 ರಷ್ಟಿದ್ದು, 5,549 ಮಂದಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ 2,495 ಪ್ರಕರಣಗಳು ವರದಿಯಾಗಿದ್ದವು.

ಏಪ್ರಿಲ್‌ನಲ್ಲಿ, ದೆಹಲಿ ಸರ್ಕಾರವು ಮಾಸ್ಕ್ ಕಡ್ಡಾಯ ಆದೇಶವನ್ನು ತೆಗೆದುಹಾಕಿತ್ತು. ಆದರೆ, ಇದೀಗ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಕಡ್ಡಾಯ ಮತ್ತು ಉಲ್ಲಂಘನೆಗೆ ದಂಡವನ್ನು ವಿಧಿಸಲು ಮತ್ತೆ ಆದೇಶಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು