ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಖಾಸಗಿ ಕಾರುಗಳಲ್ಲಿ ಸಂಚರಿಸಿದರೆ ಮಾಸ್ಕ್‌ ಕಡ್ಡಾಯ ಇಲ್ಲ

Last Updated 22 ಏಪ್ರಿಲ್ 2022, 15:27 IST
ಅಕ್ಷರ ಗಾತ್ರ

ನವದೆಹಲಿ: ಖಾಸಗಿ ಕಾರು ಅಥವಾ ನಾಲ್ಕು ಚಕ್ರದ ವಾಹನಗಳಲ್ಲಿ ಸಂಚರಿಸುವವರು ಮಾಸ್ಕ್‌ ಧರಿಸುವುದು ಕಡ್ಡಾಯವಲ್ಲ ಎಂದು ದೆಹಲಿ ಸರ್ಕಾರ ತಿಳಿಸಿದೆ.

ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವಿಕೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು. ಒಂದು ವೇಳೆ ಯಾರಾದರೂ ನಿಯಮವನ್ನು ಉಲ್ಲಂಘಿಸಿದರೆ ಅವರಿಗೆ ₹ 500 ದಂಡ ವಿಧಿಸಲಾಗುತ್ತದೆ ಎಂದೂ ತಿಳಿಸಲಾಗಿದೆ.

ಆದರೆ, ಖಾಸಗಿ ಕಾರುಗಳಲ್ಲಿ ಓಡಾಡುವ ಜನರಿಗೆ ಇದು ಅನ್ವಯವಾಗುವುದಿಲ್ಲ ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT