ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಥರಸ್‌ ಅತ್ಯಾಚಾರ ಪ್ರಕರಣ: ದೆಹಲಿಯ ಜಂತರ್‌ ಮಂತರ್‌ನಲ್ಲಿ ಭಾರಿ ಪ್ರತಿಭಟನೆ

Last Updated 2 ಅಕ್ಟೋಬರ್ 2020, 14:03 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಹಾಥರಸ್‌ ಅತ್ಯಾಚಾರ ಪ್ರಕರಣ ಖಂಡಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಶುಕ್ರವಾರ ಸಂಜೆ ಭಾರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಹಾಥರಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟಿರುವ ಯುವತಿಯ ಕುಟುಂಬಕ್ಕೆ ನ್ಯಾಯ ದೊರಕಿಸಿ ಕೊಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಈ ಪ್ರಕರಣದಲ್ಲಿ ಉತ್ತರ ಪ್ರದೇಶ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆಯೂ ಪ್ರತಿಭಟನಾಕಾರರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಈ ಮೊದಲು ಇಂಡಿಯಾ ಗೇಟ್‌ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ, ದೆಹಲಿ ಪೊಲೀಸರು ಇಂಡಿಯಾ ಗೇಟ್‌ ಪ್ರದೇಶದಲ್ಲಿ 144 ಸೆಕ್ಷನ್‌ ವಿಧಿಸಿದ್ದು, ಪ್ರತಿಭಟನೆಯನ್ನು ಜಂತರ್‌ ಮಂತರ್‌ಗೆ ವರ್ಗಾಯಿಸಲಾಗಿದೆ.

ಈ ವಿಚಾರವಾಗಿ ವಿಡಿಯೊ ಟ್ವೀಟ್‌ ಮಾಡಿರುವ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ಅವರು ತಮ್ಮ ಬೆಂಬಲಿಗರನ್ನು ಜಂತರ್ ಮಂತರ್‌ನಲ್ಲಿ ಒಟ್ಟುಗೂಡುವಂತೆ ಕೇಳಿಕೊಂಡಿದ್ದಾರೆ. '

'ಪೊಲೀಸರು ಸರ್ವಾಧಿಕಾರಿಗಳಂತೆ ಇಂಡಿಯಾ ಗೇಟ್ ಅನ್ನು ಮುಚ್ಚಿದ್ದಾರೆ. ಇದು ಸರ್ವಾಧಿಕಾರವನ್ನು ತೋರಿಸುತ್ತಾರೆ. ಆದರೆ, ನಮ್ಮ ನ್ಯಾಯದ ಬೇಡಿಕೆಯು ದುರ್ಬಲಗೊಳ್ಳಲು ನಾವು ಬಿಡುವುದಿಲ್ಲ. ಇದಕ್ಕೆ ಪ್ರಧಾನಿ ಮೋದಿ ಉತ್ತರಿಸಬೇಕಾಗುತ್ತದೆ' ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ತಿಳಿಸಿದ್ದಾರೆ.

ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಸಿಪಿಐ ಮುಖಂಡ ಡಿ ರಾಜಾ ಈಗಾಗಲೇ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, 'ಯೋಗಿ ಆದಿತ್ಯನಾಥ್‌ ಸರ್ಕಾರಕ್ಕೆ ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿರಲು ಯಾವುದೇ ಹಕ್ಕಿಲ್ಲ. ಹಾಥರಸ್‌ ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ' ಎಂದು ಯೆಚೂರಿ ತಿಳಿಸಿದ್ದಾರೆ.

ಮಹಾತ್ಮ ಗಾಂಧಿಯವರಂತೆ ಬಟ್ಟೆ ಧರಿಸಿರುವ ಮೂಲಕ ಯುವ ಕಾಂಗ್ರೆಸ್ ಸದಸ್ಯರು ಜಂತರ್ ಮಂತರ್ ರಸ್ತೆಯಲ್ಲಿ ಪ್ರದರ್ಶನವನ್ನು ನಡೆಸಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಂತರ್‌ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT