ಗುರುವಾರ , ಜೂನ್ 24, 2021
22 °C

ಮಹಾರಾಷ್ಟ್ರ: ಠಾಣೆ ಆಸ್ಪತ್ರೆಯಲ್ಲಿ ಬೆಂಕಿ ಅವಘಡ, 4 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಕಿ ಅವಘಡ–ಪ್ರಾತಿನಿಧಿಕ ಚಿತ್ರ

ಠಾಣೆ: ಇಲ್ಲಿನ ಮುಂಬ್ರಾ ಪ್ರದೇಶದಲ್ಲಿರುವ ಪ್ರೈಮ್‌ ಕ್ರಿಟಿಕೇರ್‌ ಹಾಸ್ಪಿಟಲ್‌ನಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ವ್ಯಾಪಿಸಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ.

ಬುಧವಾರ ಮುಂಜಾನೆ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಆಸ್ಪತ್ರೆಯಿಂದ 20ಕ್ಕೂ ಹೆಚ್ಚು ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಠಾಣೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳಿಂದ ತಿಳಿದು ಬಂದಿದೆ.

ಮುಂಬ್ರಾ–ಕಾಲ್ವಾದ ಶಾಸಕ ಮತ್ತು ಮಹಾರಾಷ್ಟ್ರದ ವಸತಿ ಸಚಿವ ಡಾ.ಜಿತೇಂದ್ರ ಅವ್ಹಾದ್ ಸ್ಥಳಕ್ಕೆ ಧಾವಿಸಿದ್ದಾರೆ.

ಬೆಂಕಿ ಕಾಣಿಸಿಕೊಳ್ಳಲು ಕಾರಣ ತಿಳಿದು ಬಂದಿಲ್ಲ. 'ಈವರೆಗೂ ಬೆಂಕಿ ಅವಘಡದಲ್ಲಿ ಮೂವರು ಸಾವಿಗೀಡಾಗಿರುವುದಾಗಿ ವರದಿಯಾಗಿದೆ. ಪೊಲೀಸರು ಮತ್ತು ಮುನ್ಸಿಪಲ್‌ ಕಾರ್ಪೊರೇಷನ್‌ ಶೀಘ್ರದಲ್ಲೇ ಮಾಹಿತಿ ನೀಡಲಿದ್ದಾರೆ' ಎಂದು ಡಾ.ಜಿತೇಂದ್ರ ಅವ್ಹಾದ್ ತಿಳಿಸಿದ್ದಾರೆ.

ಅವಘಡ ಸಂಭವಿಸಿರುವ ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ರೋಗಿಗಳನ್ನು ಸಾಗಿಸುವಾಗ ನಾಲ್ಕು ಮಂದಿ ಸಾವಿಗೀಡಾಗಿರುವುದಾಗಿ ಎಎನ್‌ಐ ಟ್ವೀಟ್‌ ಮಾಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು