ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಆಸ್ಪತ್ರೆಗಳಲ್ಲಿ ಸಿಸೇರಿಯನ್‌ ಹೆಚ್ಚು

Last Updated 20 ಸೆಪ್ಟೆಂಬರ್ 2020, 1:26 IST
ಅಕ್ಷರ ಗಾತ್ರ
ADVERTISEMENT
""

ಗ್ರಾಮಿಣ ಪ್ರದೇಶದಲ್ಲಿ ಶೇ 90ರಷ್ಟು ಹಾಗೂ ನಗರ ಪ್ರದೇಶದಲ್ಲಿ ಶೇ 96ರಷ್ಟು ಹೆರಿಗೆಗಳು ಆಸ್ಪತ್ರೆಗಳಲ್ಲೇ ಆಗುತ್ತಿದ್ದರೂ ಈಗಲೂ ಸಣ್ಣ ಪ್ರಮಾಣದಲ್ಲಿ ಮನೆಗಳಲ್ಲಿ ಹೆರಿಗೆಗಳು ಆಗುತ್ತಿವೆ. ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆಗಳು ಹೆಚ್ಚಾಗುತ್ತಿದ್ದರೆ, ನಗರ ಪ್ರದೇಶದಲ್ಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಆಗುವ ಹೆರಿಗೆಗಳ ಪ್ರಮಾಣ ಬಹುತೇಕ ಒಂದೇ ಪ್ರಮಾಣದಲ್ಲಿದೆ.

ಕರ್ನಾಟಕದಲ್ಲಿ ಸಾಂಸ್ಥಿಕ ಹೆರಿಗೆಗಳ ಪ್ರಮಾಣ ಹೆಚ್ಚಾಗಿದೆ. ಮನೆಗಳಲ್ಲಿ ಆಗುವ ಹೆರಿಗೆಗಳು ತೀರಾ ಕಡಿಮೆ. ರಾಜ್ಯದ ಗ್ರಾಮೀಣ ಪ್ರದೇಶದವರು ಹೆಚ್ಚಾಗಿ ಸರ್ಕಾರಿ ಆಸ್ಪತ್ರೆಗಳನ್ನು ಅವಲಂಬಿಸಿದರೆ, ನಗರಪ್ರದೇಶದ ಜನರು ಖಾಸಗಿ ಆಸ್ಪತ್ರೆಗಳ ಮೊರೆಹೋಗುತ್ತಾರೆ ಎಂದು ವರದಿ ಹೇಳಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಸಿಸೇರಿಯನ್‌ ಹೆಚ್ಚು

ದೇಶದಲ್ಲಿ ಒಟ್ಟಾರೆ ಶೇ 28ರಷ್ಟು ಶಿಶು ಜನನಗಳು ಶಸ್ತ್ರಚಿಕಿತ್ಸೆಯ ಮೂಲಕ ನಡೆಯುತ್ತವೆ. ಗ್ರಾಮೀಣ ಪ್ರದೇಶದಲ್ಲಿ ಇದರ ಪ್ರಮಾಣ ಶೇ 24ರಷ್ಟಿದ್ದರೆ, ನಗರ ಪ್ರದೇಶದಲ್ಲಿ ಶೇ 41ರಷ್ಟಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ನಡೆಯುವ ಹೆರಿಗೆಗಳಲ್ಲಿ ಶೇ 17ರಷ್ಟು ಮಾತ್ರ ಶಸ್ತ್ರಚಿಕಿತ್ಸೆಯ ಮೂಲಕ ನಡೆಯುತ್ತವೆ (ಗ್ರಾಮಿಣ ಪ್ರದೇಶದಲ್ಲಿ ಶೇ 14, ನಗರಪ್ರದೇಶದಲ್ಲಿ ಶೇ 26). ಆದರೆ, ಖಾಸಗಿ ಆಸ್ಪತ್ರೆಗಳಲ್ಲಿ ನಡೆಯುವ ಹೆರಿಗೆಗಳಲ್ಲಿ ಶೇ 55ರಷ್ಟು ಶಸ್ತ್ರಚಿಕಿತ್ಸೆಯ ಮೂಲಕ ನಡೆಯುತ್ತವೆ (ಗ್ರಾಮೀಣ ಶೇ 54, ನಗರಪ್ರದೇಶ ಶೇ 56). ರಾಜ್ಯದಲ್ಲೂ ಖಾಸಗಿ ಆಸ್ಪತ್ರೆಗಳಲ್ಲಿಯೇ ಸಿಜೇರಿಯನ್‌ ಪ್ರಮಾಣ ಅಧಿಕವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT