ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೌರ್ಯ ಹೇಳಿಕೆ ವೈಯಕ್ತಿಕ: ಸಮಾಜವಾದಿ ಪಕ್ಷ ರಾಮನ ಆದರ್ಶ ಪಾಲಿಸುತ್ತದೆ- ಶಿವಪಾಲ್‌

Last Updated 24 ಜನವರಿ 2023, 14:23 IST
ಅಕ್ಷರ ಗಾತ್ರ

ಲಖನೌ: ‘ರಾಮಚರಿತಮಾನಸ’ ಕುರಿತು ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ವಿವಾದಾತ್ಮಕ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವಾಗಿದ್ದು, ಪಕ್ಷಕ್ಕೆ ಯಾವುದೇ ಸಂಬಂಧವಿಲ್ಲ. ಪಕ್ಷವು ಭಗವಾನ್‌ ರಾಮ ಮತ್ತು ಕೃಷ್ಣನ ಆದರ್ಶಗಳನ್ನು ಅನುಸರಿಸುತ್ತದೆ ಎಂದು ಸಮಾಜವಾದಿ ಪಕ್ಷದ ಹಿರಿಯ ನಾಯಕ ಶಿವಪಾಲ್‌ ಸಿಂಗ್ ಯಾದವ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಉತ್ತರ ಪ್ರದೇಶದ ಪ್ರಮುಖ ಒಬಿಸಿ ನಾಯಕ ಎಂದು ಪರಿಗಣಿಸಲ್ಪಟ್ಟಿರುವ ಮೌರ್ಯ ಅವರು, ರಾಮಚರಿತಮಾನಸದ ಕೆಲವು ಭಾಗಗಳು ಜಾತಿಯ ಆಧಾರದ ಮೇಲೆ ಸಮಾಜದ ದೊಡ್ಡ ವರ್ಗವನ್ನು ಅವಮಾನಿಸುತ್ತವೆ ಮತ್ತು ಇವುಗಳನ್ನು ನಿಷೇಧಿಸಬೇಕು ಎಂದು ಕೆಲ ದಿನಗಳ ಹಿಂದೆ ಹೇಳಿದ್ದರು. ಇದಕ್ಕೆ ಮುಸ್ಲಿಂ ಧರ್ಮಗುರುಗಳಿಂದಲೂ ವಿರೋಧ ವ್ಯಕ್ತವಾಗಿತ್ತು.

ಮೌರ್ಯ ಅವರ ಹೇಳಿಕೆ ಕುರಿತು ಇಟಾವಾದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಪಾಲ್‌ ಸಿಂಗ್‌, ‘ಇದು ಅವರ ವೈಯಕ್ತಿಕ ಹೇಳಿಕೆಯಾಗಿದೆ ಹೊರತು ಪಕ್ಷದಲ್ಲ. ನಾವು ಶ್ರೀರಾಮ ಮತ್ತು ಭಗವಾನ್ ಕೃಷ್ಣನ ಆದರ್ಶಗಳನ್ನು ಅನುಸರಿಸುವ ಮತ್ತು ಅವರು ತೋರಿಸಿದ ಮಾರ್ಗದಲ್ಲಿ ಸಾಗುವವರಾಗಿದ್ದೇವೆ ಎಂದಿದ್ದಾರೆ.

ಬಿಜೆಪಿ ರಾಮನ ಆದರ್ಶಗಳನ್ನು ಅನುಸರಿಸುತ್ತದೆಯೇ? ಎಂದು ಪ್ರಶ್ನಿಸಿದ ಅವರು, ಪ್ರಸ್ತುತ ಇಲ್ಲಿ ಬಿಜೆಪಿ ವಿರೋಧಿ ವಾತಾವರಣ ಇದೆ. ಸಮಾಜವಾದಿ ಪಕ್ಷದ ಸರ್ಕಾರವನ್ನು ಜನರು ಮರಳಿ ತರುತ್ತಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT