ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

GST ಪಾಲು ಕೊಡದಿದ್ದರೆ ತೆರಿಗೆ ಪಾವತಿಸಲ್ಲ: ಕೇಂದ್ರಕ್ಕೆ ಮಮತಾ ಎಚ್ಚರಿಕೆ

Last Updated 15 ನವೆಂಬರ್ 2022, 12:20 IST
ಅಕ್ಷರ ಗಾತ್ರ

ಜಾರ್‌ಗ್ರಾಮ್‌: ‘ರಾಜ್ಯಕ್ಕೆ ಬರಬೇಕಿರುವ ಜಿಎಸ್‌ಟಿ ಪಾಲನ್ನು ನೀಡದೇ ಹೋದರೆ, ಕೇಂದ್ರ ಸರ್ಕಾರಕ್ಕೆ ಜಿಎಸ್‌ಟಿ ಪಾವತಿ ಮಾಡುವುದನ್ನೇ ನಿಲ್ಲಿಸಬೇಕಾದಿತು‘ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾ‌ರೆ.

ಇಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಒಂದೋ ಜಿಎಸ್‌ಟಿ ಬಾಕಿಯನ್ನು ನೀಡಬೇಕು. ಇಲ್ಲದಿದ್ದರೆ ಅಧಿಕಾರದಿಂದ ಕೆಳಗಿಯಬೇಕು‘ ಎಂದು ಹೇಳಿದ್ದಾರೆ.

‘ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹಣ ಬಿಡುಗಡೆ ಮಾಡುತ್ತಿಲ್ಲ‘ ಎಂದು ವಾಗ್ದಾಳಿ ನಡೆಸಿದ ಅವರು, ಇದನ್ನು ವಿರೋಧಿಸಿ ಬುಡಕಟ್ಟು ಮಂದಿ ಬೀದಿಗೆ ಇಳಿಯಬೇಕು ಎಂದು ಕರೆ ನೀಡಿದರು.

‘ರಾಜ್ಯ ಸರ್ಕಾರಕ್ಕೆ ಬರಬೇಕಿರುವ ಪಾಲು ಪಡೆಯಲು ನಾವು ಕೇಂದ್ರ ಸರ್ಕಾರದ ಮುಂದೆ‌ ಭಿಕ್ಷೆ ಬೇಡಬೇಕೇ? ಅವರು ನರೇಗಾ ಯೋಜನೆಯ ಹಣ ಬಿಡುಗಡೆ ಮಾಡುತ್ತಿಲ್ಲ. ಒಂದು ವೇಳೆ ಬರಬೇಕಿದ್ದ ಹಣ ಪಾವತಿ ಮಾಡದಿದ್ದರೆ ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು‘ ಎಂದು ಮಮತಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT