ಬುಧವಾರ, ಡಿಸೆಂಬರ್ 2, 2020
25 °C

ಪಕ್ಷ, ರಾಜಕೀಯ ಬದಿಗಿಟ್ಟು ಸಾರ್ವಜನಿಕ ಹಿತಾಸಕ್ತಿಗಾಗಿ ಕೆಲಸ ಮಾಡೋಣ: ಮಾಯಾವತಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಶಾಸಕರು ಪಕ್ಷ ರಾಜಕೀಯವನ್ನು ಬದಿಗಿಟ್ಟು ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಗಮನಹರಿಸಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಬಿಎಸ್‌‍‍ಪಿ ಮುಖ್ಯಸ್ಥೆ ಮಾಯಾವತಿ ಅವರು ಒತ್ತಾಯಿಸಿದ್ದಾರೆ. 

ಈ ಬಗ್ಗೆ ಟ್ವೀಟ್‌ ಮಾಡಿರುವ ಮಾಯಾವತಿ, ’ಪಕ್ಷ ರಾಜಕೀಯವನ್ನು ಬದಿಗಿಟ್ಟು ಜನರ ಹಿತಾಸಕ್ತಿಗಾಗಿ ಜೊತೆಯಾಗಿ ಕೆಲಸ ಮಾಡಬೇಕು ಎಂದು ಆಡಳಿತ ಮತ್ತು ವಿರೋಧ ಪಕ್ಷಗಳ ಶಾಸಕರಿಗೆ ನಾನು ಮನವಿ ಮಾಡುತ್ತೇನೆ. ಸರ್ಕಾರ ಮತ್ತು ಆಡಳಿತವನ್ನು ಜವಾಬ್ದಾರಿಯುತವಾಗಿ ನಿಭಾಯಿಸೋಣ’ ಎಂದು ಅವರು ಹೇಳಿದ್ದಾರೆ.

ಸರ್ಕಾರದ ಕಾರ್ಯಸೂಚಿಯಿಂದ ಅಭಿವೃದ್ಧಿಯ ವಿಷಯ ಕಾಣೆಯಾಗಿದೆ. ಆದರೆ, ನಾವು ಮಹಿಳೆಯರ ಮೇಲೆ ನಡೆಯುವ ಶೋಷಣೆ, ದಲಿತ, ಮುಸ್ಲಿಂ ಮತ್ತು ಬ್ರಾಹ್ಮಣ ಸಮುದಾಯದ ಜನರ ಹತ್ಯೆಯ ವಿಷಯವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸೋಣ. ಕಾನೂನು ಸುವ್ಯವಸ್ಥೆಯನ್ನು ಮತ್ತೆ ಸರಿ ದಾರಿಗೆ ತರುವ ಕೆಲಸ ಮಾಡೋಣ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು