ಮಂಗಳವಾರ, ಮೇ 11, 2021
28 °C

ಹಾಥರಸ್ ಪ್ರಕರಣ: ಉತ್ತರ ಪ್ರದೇಶ ಸರ್ಕಾರದ ಕಾರ್ಯವೈಖರಿ ಪ್ರಶ್ನಿಸಿದ ಮಾಯಾವತಿ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಲಖನೌ: ‘ಹಾಥರಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಕೆಲವೊಂದು ಹೊಸ ವಿಷಯಗಳು ಬೆಳಕಿಗೆ ಬಂದಿವೆ. ಇದು ಉತ್ತರ ಪ್ರದೇಶ ಸರ್ಕಾರದ ಕಾರ್ಯವೈಖರಿ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟು ಹಾಕಿದೆ’ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಯಾವತಿ ಅವರು ಸೋಮವಾರ ವಾಗ್ದಾಳಿ ನಡೆಸಿದರು.

ಮಾರ್ಚ್‌ 5 ರಂದು ವಿಶೇಷ ನ್ಯಾಯಾಧೀಶರು ನಡೆಸಿದ ವಿಚಾರಣೆ ವೇಳೆ ಸಂತ್ರಸ್ತೆಯ ಪರ ವಕೀಲರು ಮತ್ತು ಸಾಕ್ಷಿಗಳಿಗೆ ಬೆದರಿಕೆಯೊಡ್ಡಲಾಗಿತ್ತು ಎಂದು ಸಂತ್ರಸ್ತೆಯ ಅಣ್ಣ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ತನಿಖೆ ನಡೆಸುವಂತೆ ಹಾಥರಸ್‌ ಜಿಲ್ಲಾ ನ್ಯಾಯಾಧೀಶರು ಮತ್ತು ಸಿಆರ್‌ಪಿಎಫ್‌ನ ಇನ್‌ಸ್ಪೆಕ್ಟರ್‌ ಜನರಲ್‌ಗೆ ಅಲಹಾಬಾದ್‌ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಇದರ ಬೆನ್ನಲ್ಲೇ ಟ್ವೀಟ್‌ ಮಾಡಿರುವ ಮಾಯಾವತಿ,‘ನ್ಯಾಯ ಪಡೆಯಲು ಹಾಥರಸ್‌ ಸಂತ್ರಸ್ತೆಯ ಕುಟುಂಬ ಪಡುತ್ತಿರುವ ಕಷ್ಟದ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೆ ಈ ಪ್ರಕರಣದಲ್ಲಿ ಬೆಳಕಿಗೆ ಬಂದಿರುವ ಹೊಸ ವಿಷಯಗಳು ಉತ್ತರ ‍ಪ್ರದೇಶ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಗಂಭೀರ ಸ್ವರೂಪದ ಪ್ರಶ್ನೆಗಳು ಎದ್ದಿವೆ’ ಎಂದಿದ್ದಾರೆ.

‘ಅಲಹಾಬಾದ್‌ ಹೈಕೋರ್ಟ್‌ನ ಈ ನಿರ್ದೇಶನವು ಉತ್ತರ ಪ್ರದೇಶ ಸರ್ಕಾರದ ನೆಮ್ಮದಿಯನ್ನು ಹಾಳುಮಾಡಿದೆ. ಉತ್ತರ ಪ್ರದೇಶದಲ್ಲಿ ಅಪರಾಧಿಗಳು ಆಳುತ್ತಾರೆ. ಇಲ್ಲಿ ನ್ಯಾಯ ಸಿಗುವುದು ಕಷ್ಟ ಎಂಬ ಗ್ರಹಿಕೆ ಜನಸಾಮಾನ್ಯರಲ್ಲಿದೆ’ ಎಂದು ಅವರು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು