ಮಂಗಳವಾರ, ಅಕ್ಟೋಬರ್ 26, 2021
20 °C

ದಲಿತ ಮಹಿಳೆಯ ಸಾಮೂಹಿಕ ಅತ್ಯಾಚಾರ: ಸಂತ್ರಸ್ತೆಗೆ ನ್ಯಾಯ ಒದಗಿಸಲು ಮಾಯಾವತಿ ಆಗ್ರಹ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಇಲ್ಲಿನ ಗೌತಮ್‌ಬುದ್ಧ ನಗರದಲ್ಲಿ ದಲಿತ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರವನ್ನು ಬಹುಜನ ಸಮಾಜವಾದಿ ಪಕ್ಷದ(ಬಿಎಸ್‌ಪಿ) ನಾಯಕಿ ಮಾಯಾವತಿ ತೀವ್ರವಾಗಿ ಖಂಡಿಸಿದ್ದು, ಈ ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸಿ, ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

‘ಸಾಮೂಹಿಕ ಅತ್ಯಾಚಾರ ಘಟನೆ ಅತ್ಯಂತ ದುಃಖಕರ ಮತ್ತು ನಾಚಿಕೆಗೇಡಿನ ಸಂಗತಿಯಾಗಿದೆ. ಉತ್ತರ ಪ್ರದೇಶ ಸರ್ಕಾರ ತಕ್ಷಣವೇ ಆರೋಪಿಗಳನ್ನು ಬಂಧಿಸಿ, ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸಂತ್ರಸ್ತೆ ಮತ್ತು ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು‘ ಎಂದು ಅವರು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಓದಿ: 

ಗೌತಮ್‌ ಬುದ್ಧ ನಗರದ ಜೆವರ್‌ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ದಲಿತ ಮಹಿಳೆಯ ಮೇಲೆ ಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆ ಜಾನುವಾರುಗಳಿಗಾಗಿ ಮೇವು ತರಲು ಗ್ರಾಮದಿಂದ ಹೊರ ಹೋಗಿದ್ದಾಗ ಈ ಕೃತ್ಯ ನಡೆದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು