ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆದರಿಕೆ ಹಾಕಿದ ಅಧಿಕಾರಿ ಸ್ಥಳದಲ್ಲಿದ್ದಾಗ ನಿಷ್ಪಕ್ಷಪಾತ ತನಿಖೆ ಹೇಗೆ ಸಾಧ್ಯ?

ಹಾಥರಸ್‌ ಜಿಲ್ಲಾಧಿಕಾರಿ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಾಯಾವತಿ
Last Updated 4 ಅಕ್ಟೋಬರ್ 2020, 7:44 IST
ಅಕ್ಷರ ಗಾತ್ರ

ಲಖನೌ: ‘ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಮಹಿಳೆಯ ಕುಟುಂಬದವರಿಗೆ ಹಾಥರಸ್ ಜಿಲ್ಲಾಧಿಕಾರಿ ಬೆದರಿಕೆ ಹಾಕುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದ್ದರೂ, ಸರ್ಕಾರ ಮೌನವಾಗಿರುವುದನ್ನು ಕಂಡು ಬಹಳ ದುಃಖವಾಗುತ್ತಿದೆ‘ ಎಂದು ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಕಳವಳ ವ್ಯಕ್ತಪಡಿಸಿದ್ದಾರೆ.

‘ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿರುವುದೇನೋ ಸರಿ. ಆದರೆ, ಗಂಭೀರ ಆರೋಪ ಎದುರಿಸುತ್ತಿರುವ ಜಿಲ್ಲಾಧಿಕಾರಿ ಹಾಥರಸ್‌ನಲ್ಲೇ ಇದ್ದಾಗ, ನಿಷ್ಪಕ್ಷಪಾತವಾಗಿ ತನಿಖೆ ಹೇಗೆ ನಡೆಯುತ್ತದೆ? ಎಂಬುದರ ಬಗ್ಗೆ ನನಗೆ ಚಿಂತೆಯಾಗಿದೆ‘ ಎಂದು ಮಾಯಾವತಿ ಹೇಳಿದ್ದಾರೆ.

ಶನಿವಾರ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಅವರು ಹಾಥರಸ್‌ನಲ್ಲಿ ಸಂತ್ರಸ್ಥೆಯ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದರು.

ಇದೇ ದಿನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿರುವುದಾಗಿ ಪ್ರಕಟಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT