ರೈತರ ರ‍್ಯಾಲಿ ವೇಳೆ ನಡೆದ ಹಿಂಸಾಚಾರ ‘ದುರದೃಷ್ಟಕರ’: ಮಾಯಾವತಿ

ಲಖನೌ: ದೆಹಲಿಯಲ್ಲಿ ಗಣರಾಜ್ಯೋತ್ಸವದ ದಿನದಂದು ರೈತರ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ನಡೆದ ಹಿಂಸಾಚಾರವನ್ನು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ‘ದುರದೃಷ್ಟಕರ’ ಎಂದು ಕರೆದಿದ್ದಾರೆ.
ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಅವರು, ‘ಈ ಕೂಡಲೇ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಮೂಲಕ, ದೀರ್ಘ ಕಾಲದಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ಮುಕ್ತಾಯಗೊಳಿಸಬೇಕು’ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
‘ದೆಹಲಿಯಲ್ಲಿ ಮಂಗಳವಾರ ರೈತರ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ನಡೆದ ಹಿಂಸಾಚಾರವು ಮುಂದೆಂದಿಗೂ ನಡೆಯಬಾರದು. ಈ ರೀತಿಯ ಘಟನೆ ನಡೆದಿರುವುದು ನಿಜಕ್ಕೂ ದುರದೃಷ್ಟಕರ. ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಅವರು ಟ್ವಿಟರ್‌ನಲ್ಲಿ ಹೇಳಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.