ಸೋಮವಾರ, ಜೂನ್ 27, 2022
24 °C

ದೆಹಲಿ ಸರ್ಕಾರ ಹೇಳಿದ್ದಕ್ಕಿಂತ ಹೆಚ್ಚು ಕೋವಿಡ್ ಸಾವುಗಳು ಸಂಭವಿಸಿವೆ: ಮೇಯರ್

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಕುರಿತಂತೆ ದೆಹಲಿ ಸರ್ಕಾರ ನೀಡಿದ ಸಂಖ್ಯೆಗಿಂತ ಹೆಚ್ಚಿನ ಸಾವುಗಳು ಶುಕ್ರವಾರ ಸಂಭವಿಸಿವೆ ಎಂದು ಉತ್ತರ ದೆಹಲಿಯ ಮೇಯರ್ ಜೈ ಪ್ರಕಾಶ್ ಹೇಳಿದ್ದಾರೆ.

ಆರೋಗ್ಯ ಇಲಾಖೆ ಹಂಚಿಕೊಂಡ ಅಧಿಕೃತ ಮಾಹಿತಿಯ ಪ್ರಕಾರ, ಏಪ್ರಿಲ್ 16 ರಂದು ದೆಹಲಿಯಲ್ಲಿ 141 ಸಾವು ಸಂಭವಿಸಿವೆ ಎಂದು ತಿಳಿಸಲಾಗಿದೆ. ಆದರೆ, ಶುಕ್ರವಾರ ದೆಹಲಿಯಲ್ಲಿ ಸಂಭವಿಸಿದ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 193 ಎಂದು ಉತ್ತರ ದೆಹಲಿಯ ಮೇಯರ್ ಹೇಳಿದ್ದಾರೆ.

‘ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಯ ಲೆಕ್ಕದ ಪ್ರಕಾರ, 193 ಸಾವು ಸಂಭವಿಸಿವೆ’ ಎಂದು ಅವರು ಹೇಳಿದ್ದಾರೆ.

ದೆಹಲಿ ನಗರದಾದ್ಯಂತ ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ 300 ಸ್ಥಳಗಳನ್ನು ನಿಗದಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಕಳೆದ ವರ್ಷವೂ, ಕೋವಿಡ್‌ ಸಾವುಗಳ ಸಂಖ್ಯೆ ಕುರಿತಂತೆ ಎಎಪಿ ನೇತೃತ್ವದ ದೆಹಲಿ ಸರ್ಕಾರ ಮತ್ತು ಬಿಜೆಪಿ ಆಡಳಿತವಿರುವ ಸ್ಥಳಿಯ ಸಂಸ್ಥೆಗಳ ನಡುವೆ ಭಿನ್ನಾಭಿಪ್ರಾಯದ ಮಾತುಗಳು ಕೇಳಿಬಂದಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು