ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಮತದಾನ ಆರಂಭ, ಪೊಲೀಸ್ ಬಿಗಿ ಭದ್ರತೆ

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ (ಎಂಸಿಡಿ) 250 ವಾರ್ಡ್ಗಳಿಗೆ ಇಂದು (ಭಾನುವಾರ) ಮತದಾನ ಆರಂಭವಾಗಿದೆ.
ಎಂಸಿಡಿ ಚುನಾವಣೆಯಲ್ಲಿ 1.45 ಕೋಟಿಗೂ ಅಧಿಕ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. 1,349 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಡಿಸೆಂಬರ್ 7ರಂದು ಮತಎಣಿಕೆ ನಡೆಯಲಿದೆ.
#MCDElections2022: Voting for the 250 wards of the Municipal Corporation of Delhi begins pic.twitter.com/xPgW7Z0xH4
— ANI (@ANI) December 4, 2022
ದೆಹಲಿಯಲ್ಲಿ ಬಿಗಿ ಭದ್ರತೆ: ಚುನಾವಣೆ ಹಿನ್ನೆಲೆಯಲ್ಲಿ ದೆಹಲಿ ನಗರದಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. 40 ಸಾವಿರ ಪೊಲೀಸರನ್ನು, 20 ಸಾವಿರ ಗೃಹರಕ್ಷಕರನ್ನು ಮತ್ತು ಅರೆಸೇನಾ ಪಡೆಯ 108 ಕಂಪನಿಗಳನ್ನು ಹಾಗೂ ರಾಜ್ಯ ಸಶಸ್ತ್ರ ಪೊಲೀಸ್ ಪಡೆಯನ್ನೂ ಭದ್ರತೆಗಾಗಿ ನಿಯೋಜಿಸಲಾಗಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕಣ್ಗಾವಲಿಗಾಗಿ 60 ಡ್ರೋನ್ಗಳನ್ನು ಬಳಸಲಾಗುತ್ತಿದೆ.
ಮತದಾನದ ವೇಳೆ ಕೋಮು ಗಲಭೆ ನಡೆಯದಂತೆ ಎಚ್ಚರಿಕೆ ವಹಿಸುವುದು, ಅಭ್ಯರ್ಥಿಗಳು ಮತದಾರರಿಗೆ ಆಮಿಷವೊಡ್ಡದಂತೆ ತಡೆಯುವುದು ಪೊಲೀಸರ ಮುಖ್ಯ ಗುರಿಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ವಿವರಿಸಿದ್ದಾರೆ. ಶಾಂತಿ ಸಮಿತಿ ಸದಸ್ಯರ ಜೊತೆ ಸಹಾಯಕ ಪೊಲೀಸ್ ಆಯುಕ್ತರು ಸಭೆ ನಡೆಸಿದ್ದಾರೆ ಎಂದಿದ್ದಾರೆ.
ವಿದ್ಯುನ್ಮಾನ ಮತ ಯಂತ್ರಗಳನ್ನು (ಇವಿಎಂ) ಇರಿಸಿರುವ ಭದ್ರತಾ ಕೊಠಡಿಗಳು, ಮತದಾನ ಕೇಂದ್ರಗಳು ಹಾಗೂ ಮತಎಣಿಕೆ ಕೇಂದ್ರಗಳ ಮೇಲೆ ಪೊಲೀಸರು ನಿಗಾ ಇರಿಸಿದ್ದಾರೆ ಎಂದೂ ಮಾಹಿತಿ ನೀಡಿದ್ದಾರೆ.
Delhi | People queue up to cast their votes at a polling booth in Matiala village. Voting for #MCDElections2022 has begun pic.twitter.com/UqWjmUfTtE
— ANI (@ANI) December 4, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.